ADVERTISEMENT

ವಿಜ್ಞಾನ ವಸ್ತುಪ್ರದರ್ಶನ ಕಲಿಕೆಗೆ ಪೂರಕ

​ಪ್ರಜಾವಾಣಿ ವಾರ್ತೆ
Published 28 ಜನವರಿ 2012, 5:20 IST
Last Updated 28 ಜನವರಿ 2012, 5:20 IST

ಶ್ರೀನಿವಾಸಪುರ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹೊ ಮ್ಮಿಸಲು ವಿಜ್ಞಾನ ವಸ್ತು ಪ್ರದರ್ಶನ ನೆರವಾಗುತ್ತವೆ. ಮಕ್ಕಳ ಹವ್ಯಾಸ ಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಕಲ್ಪಿಸುತ್ತವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಹೇಳಿದರು.

ಸುಗಟೂರು ಸಬರಮತಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಶುಕ್ರವಾರ ನಡೆದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಮಾದರಿಗಳ ತಯಾರಿಕೆಯಲ್ಲಿ ಮಕ್ಕಳಿಗೆ ಮಾರ್ಗದರ್ಶನ ಮಾಡಬೇಕು. ಶೈಕ್ಷಣಿಕ ಪ್ರಗತಿಗೆ ಪೂರಕವಾಗಿರುವಂತೆ ಎಚ್ಚರ ವಹಿಸಬೇಕು ಎಂದರು.

ಬಾಪು ಸೈಂಟಿಫಿಕ್ ಅಂಡ್ ಎಜುಕೇಷನಲ್ ಟ್ರಸ್ಟ್‌ನ ಕಾರ್ಯದರ್ಶಿ ಸಿ.ಬೈರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಷಯ ತನಿಖಾದಿಕಾರಿ ಸಿ.ಆರ್.ಅಶೋಕ್, ವಿಷಯ ಪರಿವೀಕ್ಷಕ ವೆಂಕಟಸ್ವಾಮಿ, ಶಾಲಾ ಟ್ರಸ್ಟ್ ಖಜಾಂಚಿ ಟಿ.ಪಿ ನಾರೆಪ್ಪ. ಶಿಕ್ಷಕ ಬಿ.ವೆಂಕಟೇಶ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಲ್ಲಿ ಗಣಿತ ವಿಷಯದಲ್ಲಿ ಹೆಚ್ಚು ಅಂಕ ಪಡೆದಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ರಾಕೆಟ್ ಉಡ್ಡಯನದ ಅಣಕು ಪ್ರದರ್ಶನ ಏರ್ಪಡಿಸಲಾಗಿತ್ತು. ಮುಖ್ಯ ಶಿಕ್ಷಕ ಎಂ.ವಿ.ದಾನಪ್ರಕಾಶ್ ಸ್ವಾಗತಿಸಿದರು. ಶಿಕ್ಷಕ ಪಿ.ಬಾಲಕೃಷ್ಣಪ್ಪ ವಂದಿಸಿದರು.

ನಿಧನಕ್ಕೆ ಸಂತಾಪ
ಶ್ರೀನಿವಾಸಪುರ:
ಪುರಸಭಾ ಸ್ಥಾಯಿ ಸಮಿತಿ ಸದಸ್ಯ ಎನ್.ವೆಂಕಟೇಶ್ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ವೆಂಕಟೇಶ್ ಗುರುವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾದರು.
 
ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ಜಿ.ಸೈಯದ್ ಖಾದರ್, ಪುರಸ ಭಾಧ್ಯಕ್ಷ ಎಸ್.ಶ್ರೀನಿವಾಸಪ್ಪ, ಜಿ.ಪಂ. ಸದಸ್ಯರಾದ ತೂಪಲ್ಲಿ ಆರ್. ನಾರಾಯಣಸ್ವಾಮಿ, ಜಿ.ಕೆ.ನಾಗರಾಜ್, ರತ್ನಮ್ಮ ಗಣೇಶ್, ಪುಷ್ಪಾವತಿ ರಾಜಶೇಖರರೆಡ್ಡಿ, ಎಪಿಎಂಸಿ ಅಧ್ಯಕ್ಷ ಎಂ. ಶ್ರೀನಿವಾಸನ್, ಪುರಸಭೆ ಮುಖ್ಯಾಧಿಕಾರಿ ಜಗದೀಶ್, ತಾ.ಪಂ. ಅಧ್ಯಕ್ಷ ವೈದ್ಯಂ ವೆಂಕಟರೆಡ್ಡಿ, ಕಾಂಗ್ರೆಸ್ ಮುಖಂಡ ಬಿ.ವೆಂಕಟರೆಡ್ಡಿ, ಪುರಸಭೆ ಹಾಗೂ ತಾಪಂ  ಸದಸ್ಯರು ಎನ್. ವೆಂಕಟೇಶ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.