ADVERTISEMENT

ವೃತ್ತಿಪರತೆ ಹೆಚ್ಚಳಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2012, 9:45 IST
Last Updated 27 ಜನವರಿ 2012, 9:45 IST

ಶ್ರೀನಿವಾಸಪುರ: ಹೊಲಿಗೆ ಕಾರ್ಮಿಕರು ವೃತ್ತಿಪರತೆ ಹೆಚ್ಚಿಸಿಕೊಂಡು ಆರ್ಥಿಕ ವಾಗಿ ಅಭಿವೃದ್ಧಿ ಹೊಂದಬೇಕು. ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಹೊಲಿಗೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಯೂನಿಯನ್ ಉಪಾಧ್ಯಕ್ಷ ಕೆ.ವಿ.ಸುರೇಶ್ ಸಲಹೆ ಮಾಡಿದರು.

ಪಟ್ಟಣದ ಸಪ್ತಗಿರಿ ವಿದ್ಯಾಸಂಸ್ಥೆ ಆವರಣದಲ್ಲಿ ಮಂಗಳವಾರ ಏರ್ಪಡಿ ಸಿದ್ದ ತಾಲ್ಲೂಕು ಹೊಲಿಗೆ ಕಾರ್ಮಿಕರ ಸಂಘದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಹಾಗೂ ಭದ್ರತಾ ಮಂಡಳಿಯನ್ನು ಸ್ಥಾಪಿಸಿದೆ. ಅದು ಇಂತಹ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಹಾಗೂ ಆರೋಗ್ಯ ಸೇವೆಯನ್ನು ಒದಗಿಸುತ್ತದೆ ಎಂದು ಹೇಳಿದರು.

ಹೊಲಿಗೆ ಕಾರ್ಮಿಕರ ಕ್ಷೇಮಾಭಿವದ್ಧಿ ಯೂನಿಯನ್ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಪೆದ್ದನ್ನ, ಉಪಾಧ್ಯಕ್ಷ ಮಹಮದ್ ರಿಯಾಜ್, ಪ್ರಧಾನ ಕಾರ್ಯದರ್ಶಿ ಎಂ. ಮುನಿವೆಂಕಟರೆಡ್ಡಿ, ಖಚಾಂಚಿ ವಿ.ನಾರಾಯಣಸ್ವಾಮಿ, ಮುಖಂಡರಾದ ಜಮೀಲ್‌ಪಾಷ, ಕೆ.ಎಂ. ನಾರಾಯಣಮೂರ್ತಿ, ಕೆ. ನಾಗರಾಜ್, ಅಜುಂಖಾನಂ, ಎಸ್.ಎಂ. ಲೀಲಾವತಿ, ಚಿತ್ರಾವತಿ, ಜಿ. ಗುರ‌್ರಪ್ಪ, ನಿಸಾರ್ ಅಹಮದ್, ಜಿಲ್ಲಾ ಘಟಕದ ಕಾರ್ಯದರ್ಶಿ ಅರುಣ್‌ಕುಮಾರ್, ಖಜಾಂಚಿ ರಮೇಶ್‌ಬಾಬು, ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಮುಮ್ತೋಜ್ ಅಹಮದ್, ರವಿಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.