ಬಂಗಾರಪೇಟೆ: ಶಿವರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಬಂಗಾರಪೇಟೆ ಗಾಂಧಿ ಭವನದಲ್ಲಿ ಗುರುವಾರ ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಕೋಲಾರ ಘಟಕ ವತಿಯಿಂದ ಸಾಯಿ ಶತಶೃಂಗ ಶಾಲೆಯ ಅಂಧ ಮಕ್ಕಳಿಗೆ ನೋಟ್ ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಯಿತು.
ಪುರಸಭೆ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಶಿವ ರಾಜ್‌ಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಂಗವಿಕಲ ಮಕ್ಕಳಿಗೆ ಸಹಾಯ ಮಾಡುತ್ತಿರುವುದು ಪ್ರಶಂಸನೀಯ ಎಂದರು. ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಚಿನ್ನಿವೆಂಕಟೇಶ್ ಮಾತನಾಡಿದರು.
ಕಾಂಗ್ರೆಸ್ ಮುಖಂಡ ಎಸ್.ನಾರಾಯಣ ಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕ ಅಧ್ಯಕ್ಷ ತಿಮ್ಮೋಪುರ ನಾಗರಾಜ್, ಸಮಾಜ ಸೇವಕ ಗಣೇಶ್ ಮಾತನಾಡಿದರು. ಶಿವರಾಜ್‌ಕುಮಾರ್ ಅಭಿಮಾನಿ ಸಂಘ ಕೋಲಾರ ಘಟಕ ಅಧ್ಯಕ್ಷ ರಾಮ್ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.