ಮಾಲೂರು: ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಮಾಲೂರಿನಲ್ಲಿ ಸಂವಿಧಾನ ಪಥಸಂಚಲನ ಮತ್ತು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಿಂಹ ಸೇನೆ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ತಿಪ್ಪಸಂದ್ರ ಶ್ರೀನಿವಾಸ್ ತಿಳಿಸಿದ್ದಾರೆ.
ಪಥಸಂಚಲನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ಸಮರ್ಪಣೆಯಾಗಿ 75 ವರ್ಷದ ಅಂಗವಾಗಿ ನ.26ರಂದು ಸಂವಿಧಾನ ಪಥಸಂಚಲನ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10ಕ್ಕೆ ನಗರದ ಹೋಂಡಾ ಕ್ರೀಡಾಂಗಣದಿಂದ ಪಥಸಂಚಲನ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಸರ್ಕಾರಿ ಬಾಲಕಿಯರ ಆಟದ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.
ತಾಲ್ಲೂಕಿನ ಬಹುತೇಕ ಗ್ರಾಮಗಳಿಗೆ ಸಮಿತಿ ಸದಸ್ಯರು ಭೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿದ್ದು, ಕಾರ್ಯಕ್ರಮದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಜೊನ್ನಮುನಿಯಪ್ಪ, ಹಳೆಹಳ್ಳಿ ತಿಮ್ಮರಾಯಪ್ಪ, ಶಿವಶಂಕರ್, ಊಸರಹಳ್ಳಿ ಗೋಪಿ, ನಾಗರಾಜ್, ವೆಂಕಟೇಶ್, ಈಶ್ವರಪ್ಪ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.