ADVERTISEMENT

ಮತ್ತೆ 19 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 17:04 IST
Last Updated 14 ಜುಲೈ 2020, 17:04 IST

ಕೋಲಾರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 19 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 189ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 6 ಮಂದಿಗೆ ಸೋಂಕು ಹರಡಿದೆ. ಉಳಿದಂತೆ ಬಂಗಾರಪೇಟೆ ತಾಲ್ಲೂಕಿನಲ್ಲಿ 5 ಮಂದಿಗೆ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನಲ್ಲಿ ತಲಾ 3 ಮಂದಿಗೆ ಹಾಗೂ ಮುಳಬಾಗಿಲು ತಾಲ್ಲೂಕಿನಲ್ಲಿ ಇಬ್ಬರಿಗೆ ಸೋಂಕು ಬಂದಿರುವುದು ಖಚಿತವಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮಂಗಳವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ ಮೂವರು, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರು, ಮಾಲೂರು, ಬಂಗಾರಪೇಟೆ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

ADVERTISEMENT

ಹೊಸದಾಗಿ ಪತ್ತೆಯಾಗಿರುವ ಸೋಂಕಿತರ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಜತೆಗೆ ಸೋಂಕಿತರ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.