
ಪ್ರಜಾವಾಣಿ ವಾರ್ತೆ
ಹಣ
ಹಣ
ಕೋಲಾರ: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿ ನಂತರ ಬೇತಮಂಗಲ ಬಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಶಿಕ್ಷಕಿ ಅಖ್ತರಿ ಬೇಗಂ ಅವರಿಗೆ ರಾಜ್ಯ ಸರ್ಕಾರ ₹ 20 ಲಕ್ಷ ಪರಿಹಾರ ಮಂಜೂರು ಮಾಡಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಹಣವನ್ನು ಅಖ್ತರಿ ಬೇಗಂ ಅವರ ಕುಟುಂಬಕ್ಕೆ ವಿತರಿಸಲಾಗುತ್ತದೆ.
ಕೋಲಾರ ತಾಲ್ಲೂಕಿನ ಕೆ.ಬಿ.ಹೊಸಹಳ್ಳಿಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಗರದ ಮಹಾಲಕ್ಷ್ಮಿ ಬಡಾವಣೆಯ ಅಖ್ತರಿ ಬೇಗಂ ಅವರನ್ನು ಸಮೀಕ್ಷೆ ನಡೆಸಲು ತಾಲ್ಲೂಕಿನ ನರಸಾಪುರ ಗ್ರಾಮಕ್ಕೆ ನಿಯೋಜಿಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.