ADVERTISEMENT

ಬೇತಮಂಗಲ | ಮೀನು ಕಳವು ಪ್ರಕರಣ: 20 ಮಂದಿಗೆ ದಂಡ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 15:25 IST
Last Updated 24 ಜೂನ್ 2025, 15:25 IST
ಬೇತಮಂಗಲ ಸಮೀಪದ ರಾಮಸಾಗರ ಕೆರೆಯಲ್ಲಿ ಮೀನು ಹಿಡಿಯುತ್ತಿರುವ ದೃಶ್ಯ
ಬೇತಮಂಗಲ ಸಮೀಪದ ರಾಮಸಾಗರ ಕೆರೆಯಲ್ಲಿ ಮೀನು ಹಿಡಿಯುತ್ತಿರುವ ದೃಶ್ಯ   

ಬೇತಮಂಗಲ: ರಾಮಸಾಗರ ಕೆರೆಯಲ್ಲಿ ಮೀನು ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಮಂದಿಗೆ ಮಂಗಳವಾರ ಬೇತಮಂಗಲ ಪೊಲೀಸ್ ಅಧಿಕಾರಿಗಳು ದಂಡ ವಿಧಿಸಿದ್ದಾರೆ. 

ಕೆಜಿಎಫ್ ತಾಲ್ಲೂಕಿನ ರಾಮಸಾಗರ ಕೆರೆಯಲ್ಲಿ ಮೀನುಗಳನ್ನು ಕಳವು ಮಾಡುತ್ತಿರುವ ಬಗ್ಗೆ ಕೆರೆ ಹರಾಜು ಪಡೆದವರು ಬೇತಮಂಗಲ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಬೇತಮಂಗಲ ಪೊಲೀಸರು ಮಂಗಳವಾರ ದಾಳಿ ನಡೆಸಿ  20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ರಾಮಸಾಗರ ಕೆರೆಯಲ್ಲಿ ಮೀನು ಸಾಕಾಣಿಕೆಗೆ ಒಂದು ವರ್ಷಕ್ಕೆ ಬರೋಬ್ಬರಿ ₹20 ಲಕ್ಷಕ್ಕೆ ಹರಾಜು ಪಡೆದಿದ್ದು, ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿ ಮೀನು ಮರಿಗಳನ್ನು ಸಾಕಾಣಿಕೆ ಮಾಡಲಾಗುತ್ತಿದೆ. ಆದರೆ, ಅವುಗಳು ಕಳ್ಳರ ಪಾಲಾಗುತ್ತಿವೆ ಎಂದು ಆರೋಪಿಸಲಾಗಿತ್ತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.