ADVERTISEMENT

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ 200 ಸಸಿ ನಾಟಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 15:13 IST
Last Updated 5 ಜೂನ್ 2025, 15:13 IST
ಬೆಂಗಳೂರಿನ ಹೆಬ್ಬಾಳದ ಪಶು ವಿಜ್ಞಾನ ಕಾಲೇಜು ಆವರಣದಲ್ಲಿ ಸಸಿಗಳನ್ನು ನಾಟಿ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
ಬೆಂಗಳೂರಿನ ಹೆಬ್ಬಾಳದ ಪಶು ವಿಜ್ಞಾನ ಕಾಲೇಜು ಆವರಣದಲ್ಲಿ ಸಸಿಗಳನ್ನು ನಾಟಿ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು   

ಮುಳಬಾಗಿಲು: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ತಾಲ್ಲೂಕಿನ ಪ್ರಗತಿ ಚಾರಿಟಬಲ್ ಟ್ರಸ್ಟ್, ಬೆಂಗಳೂರಿನ ಸಂಭ್ರಮ್ ಕಾಲೇಜು , ಪಶು ವೈದ್ಯಕೀಯ ಕಾಲೇಜು , ಪ್ರಗತಿ ಚಾರಿಟಬಲ್ ಟ್ರಸ್ಟ್ , ನೇಶನ್ ಫಸ್ಟ್ ಸಿಟಿಜೆನ್ ಸೋಲ್ಜರ್ಸ್, ಹ್ಯೂಮನ್ ರೈಟ್ಸ್ ಡಿಫೆಂಡರ್ಸ್ ಕೌನ್ಸಿಲ್ , ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ , ನ್ಯಾಷನಲ್ ಸರ್ವಿಸ್ ಸೈನ್ಸ್ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಹೆಬ್ಬಾಳದ ಪಶು ವಿಶ್ವವಿದ್ಯಾಲಯ ಆವರಣದಲ್ಲಿ ಗುರುವಾರ 200 ಸಸಿ ನೆಡಲಾಯಿತು.

200 ವಿದ್ಯಾರ್ಥಿಗಳು, ಸ್ವಯಂ ಸೇವಕರು 200 ಸಸಿ ನೆಟ್ಟು ಪರಿಸರ ದಿನ ಆಚರಿಸಲಾಯಿತು.

ಪ್ರಗತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮುನೇಶ್, ಪಶು ವಿಶ್ವವಿದ್ಯಾಲಯದ ಡೀನ್ ಶಿವಕುಮಾರ್ ಗೌಡ, ಇಂದ್ರೇಶ್ , ಜೋಗಲಕಾಷ್ಠಿ ಮುನೇಶ್ ಮತ್ತಿತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.