ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 41 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 11,186ಕ್ಕೆ ಏರಿಕೆಯಾಗಿದೆ. ಗುರುವಾರ 244 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.
ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,50,209 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,39,023 ಜನರ ವರದಿಗಳು ನೆಗೆಟಿವ್ ಬಂದಿವೆ.
ಈವರೆಗೆ ಜಿಲ್ಲೆಯಲ್ಲಿ 110 ಮಂದಿ ಮೃತಪಟ್ಟರೆ, 10,720 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 356 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.