ADVERTISEMENT

ಮತ್ತೆ 42 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 15:56 IST
Last Updated 3 ಆಗಸ್ಟ್ 2020, 15:56 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 42 ಮಂದಿಗೆ ಕೊರೊನಾ ಹರಡಿರುವುದು ಸೋಮವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 671ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 24 ಮಂದಿಗೆ ಸೋಂಕು ತಗುಲಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವ 12 ಮಂದಿಗೆ, ಸೋಂಕಿತರ ಸಂಪರ್ಕದಿಂದ 8 ಮಂದಿಗೆ, ಹೊರ ಜಿಲ್ಲೆಗೆ ಹೋಗಿ ಬಂದಿದ್ದ ಒಬ್ಬರಿಗೆ, ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಗರ್ಭಿಣಿಯೊಬ್ಬರಿಗೆ ಸೋಂಕು ಹರಡಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ ಒಬ್ಬರಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ಬಂದಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ, ಕೆಜಿಎಫ್‌ ತಾಲ್ಲೂಕಿನಲ್ಲಿ ಹೊರ ಜಿಲ್ಲೆಗೆ ಹೋಗಿ ಬಂದಿದ್ದ 5 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ತಗುಲಿದೆ.

ADVERTISEMENT

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಇಬ್ಬರಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ, ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

54 ಮಂದಿ ಗುಣಮುಖ: ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 54 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 36 ಮಂದಿ, ಬಂಗಾರಪೇಟೆ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಒಬ್ಬರು, ಮಾಲೂರು ತಾಲ್ಲೂಕು 5, ಮುಳಬಾಗಿಲು ತಾಲ್ಲೂಕಿನ 4 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 7 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.