ADVERTISEMENT

ಕೊರೊನಾ: 45 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 14:49 IST
Last Updated 14 ನವೆಂಬರ್ 2020, 14:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದ್ದು, ಶನಿವಾರ 45 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ ಇಬ್ಬರು, ಮಾಲೂರು ತಾಲ್ಲೂಕಿನ 13, ಬಂಗಾರಪೇಟೆ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 4 ಮಂದಿ, ಮುಳಬಾಗಿಲು ತಾಲ್ಲೂಕಿನ 12 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 10 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಇದರ ಬೆನ್ನಲ್ಲೇ ಹೊಸದಾಗಿ 14 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 460ಕ್ಕೆ ಏರಿಕೆಯಾಗಿದೆ. ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಮಾಲೂರು ತಾಲ್ಲೂಕಿನ 7 ಹಾಗೂ ಕೆಜಿಎಫ್‌ ತಾಲ್ಲೂಕಿನ 3 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ADVERTISEMENT

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.