ADVERTISEMENT

ಕಸಾಯಿಖಾನೆಗೆ ಸಾಗಿಸುತ್ತಿದ್ದ 5 ಹಸು ಸಾವು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 16:35 IST
Last Updated 28 ಸೆಪ್ಟೆಂಬರ್ 2021, 16:35 IST
ಕೋಲಾರ ತಾಲ್ಲೂಕಿನ ಚಾಕರಸನಹಳ್ಳಿ ಮಾರ್ಗವಾಗಿ ಸೋಮವಾರ ರಾತ್ರಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ಪರಿಶೀಲಿಸಿದರು
ಕೋಲಾರ ತಾಲ್ಲೂಕಿನ ಚಾಕರಸನಹಳ್ಳಿ ಮಾರ್ಗವಾಗಿ ಸೋಮವಾರ ರಾತ್ರಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ಪರಿಶೀಲಿಸಿದರು   

ಕೋಲಾರ: ತಾಲ್ಲೂಕಿನ ಚಾಕರಸನಹಳ್ಳಿ ಮಾರ್ಗವಾಗಿ ಲಾರಿಗಳಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 20 ಹಸುಗಳ ಪೈಕಿ 5 ಹಸು ಮೃತಪಟ್ಟಿದ್ದು, ಗ್ರಾಮಸ್ಥರು ಲಾರಿಗಳನ್ನು ಅಡ್ಡಗಟ್ಟಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ತಾಲ್ಲೂಕಿನ ವಕ್ಕಲೇರಿ ಗ್ರಾಮದ ವೆಂಕಟೇಶ್‌ಗೌಡ ಎಂಬುವರ ತೋಟದ ಮನೆಯಿಂದ ಸೋಮವಾರ ರಾತ್ರಿ 20 ಹಸುಗಳನ್ನು ಎರಡು ಲಾರಿಗಳಲ್ಲಿ ಸಾಗಿಸಲಾಗುತ್ತಿತ್ತು. ಲಾರಿಗಳು ಗ್ರಾಮದ ಬಳಿ ಬರುತ್ತಿದ್ದಂತೆ ಚಾಕರಸನಹಳ್ಳಿ ಗ್ರಾಮಸ್ಥರು ಅಡ್ಡಗಟ್ಟಿ ವೇಮಗಲ್‌ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಲಾರಿಗಳಲ್ಲಿ ನಿಗದಿತ ಭಾರ ಮಿತಿ ಮೀರಿ ಉಸಿರಾಡಲು ಸಾಧ್ಯವಾಗದಂತೆ ಹಸುಗಳನ್ನು ತುಂಬಿದ್ದರಿಂದ 5 ಹಸುಗಳು ಉಸಿರುಗಟ್ಟಿ ಮೃತಪಟ್ಟಿವೆ. ಜತೆಗೆ ಹಸುಗಳಿಗೆ ಸಮರ್ಪಕವಾಗಿ ಮೇವು ಕೊಟ್ಟಿರಲಿಲ್ಲ. ಹೀಗಾಗಿ ಅವು ಮೃತಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸಿದರು.

ADVERTISEMENT

ಉಳಿದ 15 ಹಸುಗಳನ್ನು ರಕ್ಷಿಸಿರುವ ವೇಮಗಲ್‌ ಪೊಲೀಸರು ಲಾರಿಗಳನ್ನು ವಶಕ್ಕೆ ಪಡೆದು ವೆಂಕಟೇಶ್‌ಗೌಡ,ಚಾಲಕರಾದ ಇದಾಯತ್‌ ಮತ್ತು ಪ್ರಸಾದ್ ವಿರುದ್ಧ ಪ್ರಕರಣ ದಾಖಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.