ADVERTISEMENT

ಲೈಂಗಿಕ ದೌರ್ಜನ್ಯ: ಶಿಕ್ಷಕನ ಬಂಧನ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 11:12 IST
Last Updated 18 ಜನವರಿ 2018, 11:12 IST

ಕೋಲಾರ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಕ್ಯಾಲನೂರು ಗ್ರಾಮದ ಜ್ಞಾನ ದೀಪಿಕಾ ಶಾಲೆಯ ಶಿಕ್ಷಕ ಮುನಿರಾಜು (32) ಎಂಬಾತನನ್ನು ವೇಮಗಲ್‌ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಅದೇ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಮೇಲೆ 2017ರ ಡಿ.30ರಂದು ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿದ್ಯಾರ್ಥಿನಿಯು ಮಂಗಳವಾರ (ಜ.16) ತನ್ನ ಪೋಷಕರಿಗೆ ಲೈಂಗಿಕ ದೌರ್ಜನ್ಯದ ವಿಷಯ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಪೋಷಕರು ನೀಡಿದ ದೂರು ಆಧರಿಸಿ ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುನಿರಾಜುನನ್ನು ಬಂಧಿಸಲಾಗಿದೆ. ಸಂತ್ರಸ್ತ ವಿದ್ಯಾರ್ಥಿನಿಗೆ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.