ADVERTISEMENT

ಕೋಲಾರ | ಜಿಲ್ಲೆಯಲ್ಲಿ 57 ಮಂದಿಗೆ ಕೋವಿಡ್–19

ಸಕ್ರಿಯ ಸೋಂಕಿತರ ಸಂಖ್ಯೆ 897ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 15:50 IST
Last Updated 8 ಆಗಸ್ಟ್ 2020, 15:50 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 57 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 897ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ ಅತಿ ಹೆಚ್ಚು ಮಂದಿಗೆ 28 ಮಂದಿಗೆ ಸೋಂಕು ಹರಡಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವ 16 ಮಂದಿಗೆ, ಸೋಂಕಿತರ ಸಂಪರ್ಕದಿಂದ 10 ಮಂದಿಗೆ, ಹೊರ ಜಿಲ್ಲೆಗೆ ಹೋಗಿದ್ದ ವ್ಯಕ್ತಿಯೊಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ಬಂದಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 7 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ತಗುಲಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 3 ಮಂದಿಗೆ, ಹೊರ ಜಿಲ್ಲೆಗೆ ಹೋಗಿ ಬಂದಿದ್ದ ಇಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಹರಡಿದೆ.

ADVERTISEMENT

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 6 ಮಂದಿಗೆ ಸೋಂಕು ಹರಡಿದೆ. ಜತೆಗೆ ಅನಾರೋಗ್ಯದ ಕಾರಣದಿಂದ ಮೃತಪಟ್ಟ 49 ವರ್ಷದ ವ್ಯಕ್ತಿಯ ಶವದಿಂದ ಕಫಾ ಮತ್ತು ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ 3 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಇಬ್ಬರಿಗೆ ಸೋಂಕು ಹರಡಿದೆ. ಈ 5 ಮಂದಿಯೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

23 ಮಂದಿ ಗುಣಮುಖ: ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ 23 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು.

ಕೋಲಾರ, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ 4 ಮಂದಿ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 5 ಮಂದಿ, ಮುಳಬಾಗಿಲು ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.