ಕೋಲಾರ: 2018ರಲ್ಲಿ ಕೊಲಾರ ನಗರದ ಎಂಟ ಮನೆಗಳಲ್ಲಿ ನಡೆದ ಕನ್ನ ಹಾಗೂ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯನ್ನು ಕೋಲಾರ ನಗರ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಮದುಗೆರೆ ಗ್ರಾಮದ ಸಂತೋಷ್ ಅಲಿಯಾಸ್ ಐಪಿಎಲ್ ಸಂತೋಷ್ (38) ಬಂಧಿತ ಆರೋಪಿ. ಈತನ ವಿರುದ್ದ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ.
ಆರೋಪಿಯ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಆರ್.ರವಿಶಂಕರ್, ಎಚ್.ಸಿ.ಜಗದೀಶ್ ಹಾಗೂ ಡಿವೈಎಸ್ಪಿ ಎಂ.ಎಚ್.ನಾಗ್ತೆ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು.
ಶೋಧ ಕಾರ್ಯಾಚರಣೆ ಕೈಗೊಂಡಿದ್ದ ಕೋಲಾರ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಸದಾನಂದ, ಅವರ ತಂಡದ ಮಹೇಶ್, ಶೇಖರ್, ರಮೇಶ್ ಗುಪ್ತ ಮಾಹಿತಿದಾರರ ಸಹಕಾರದೊಂದಿಗೆ ಆರೋಪಿಯ ಇರುವಿಕೆ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ್ದರು.
ಆಗಸ್ಟ್ 1ರಂದು ಹಾಸನ ಜಿಲ್ಲೆಯ ಸಕಲೇಶಪುರ ನಗರದ ಬೆಂಗಳೂರು ಬೈಪಾಸ್ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಿ ಕರೆ ತಂದಿದ್ದಾರೆ. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಎಸ್‌ಪಿ ನಿಖಿಲ್ ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.