ADVERTISEMENT

ಮುಂದುವರಿದ ಕೋವಿಡ್‌ ಸೋಂಕಿತರ ಸಾವಿನ ಸರಣಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 12:50 IST
Last Updated 18 ಜುಲೈ 2021, 12:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಭಾನುವಾರ ಕೆಜಿಎಫ್‌ ತಾಲ್ಲೂಕಿನ ಸೋಂಕಿತರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 546ಕ್ಕೆ ಏರಿಕೆಯಾಗಿದೆ.

ಹೊಸದಾಗಿ 33 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 458ಕ್ಕೆ ಇಳಿದಿದೆ. ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 9 ಮಂದಿಗೆ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಮೂವರಿಗೆ, ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ 8 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 36 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ADVERTISEMENT

ಕೋಲಾರ ತಾಲ್ಲೂಕಿನ 21 ಮಂದಿ, ಕೆಜಿಎಫ್‌ ತಾಲ್ಲೂಕಿನ 10, ಮುಳಬಾಗಿಲು ತಾಲ್ಲೂಕಿನ 5 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.