ADVERTISEMENT

ಗುಣಮುಖ ಪ್ರಮಾಣದಲ್ಲಿ ಕೊಂಚ ಏರಿಕೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 16:42 IST
Last Updated 7 ಸೆಪ್ಟೆಂಬರ್ 2020, 16:42 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದ್ದು, ಸೋಮವಾರ 77 ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾದವರ ಸಂಖ್ಯೆಯು ಹೆಚ್ಚಿದೆ. ಕೋಲಾರ ತಾಲ್ಲೂಕಿನ 26 ಮಂದಿ, ಮಾಲೂರು ತಾಲ್ಲೂಕಿನ 19, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 12, ಮುಳಬಾಗಿಲು ತಾಲ್ಲೂಕಿನ 8 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 9 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಇದರ ಬೆನ್ನಲ್ಲೇ ಹೊಸದಾಗಿ 45 ಮಂದಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 738ಕ್ಕೆ ಏರಿಕೆಯಾಗಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ.

ADVERTISEMENT

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 21 ಮಂದಿಗೆ, ಮಾಲೂರು ತಾಲ್ಲೂಕಿನ 9, ಕೆಜಿಎಫ್‌ ತಾಲ್ಲೂಕಿನ 10, ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿ, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸುರಕ್ಷತಾ ಕ್ರಮವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.