ಕೆಜಿಎಫ್: ನ್ಯಾಯಾಲಯದಿಂದ ವಾರಂಟ್ ಹೊರಡಿಸಿದ್ದರೂ, ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ ಎಂಟು ಮಂದಿಯನ್ನು ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗಿ, ನಂತರ ನಾಪತ್ತೆಯಾಗಿದ್ದವರ ಪತ್ತೆಗಾಗಿ ಜಿಲ್ಲಾ ಪೊಲೀಸರು ಪತ್ತೆ ಕ್ರಮ ಕೈಗೊಂಡಿದ್ದರು. ಎರಡರಿಂದ ಐದು ವರ್ಷದವರೆಗೆ ನಾಪತ್ತೆಯಾದವರನ್ನು ಪತ್ತೆ ಹಚ್ಚಲಾಗಿದೆ. ರಾಬರ್ಟಸನ್‌ಪೇಟೆ, ಆಂಡರಸನ್‌ಪೇಟೆ ಮತ್ತು ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.