ಕೋಲಾರ: ತಾಲ್ಲೂಕಿನ ಚನ್ನಸಂದ್ರ ಗ್ರಾಮದಲ್ಲಿ ಸೋಮವಾರ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ಮಂಗಮ್ಮ (80) ಎಂಬ ವೃದ್ಧೆ ಮೃತಪಟ್ಟಿದ್ದಾರೆ.
ಚನ್ನಸಂದ್ರ ಗ್ರಾಮದ ಮಂಗಮ್ಮ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಸರಕು ಸಾಗಣೆ ವಾಹನ ಅವರಿಗೆ ಗುದ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಮಗಲ್ ಠಾಣೆ ಪೊಲೀಸರು ಚಾಲಕನನ್ನು ಬಂಧಿಸಿ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.