ಸಾಂಕೇತಿಕ ಚಿತ್ರ
ಮಾಲೂರು: ತಾಲ್ಲೂಕಿನ ಮಾಲೂರು-ಕೋಲಾರ ರಸ್ತೆಯ ಚಿಕ್ಕ ಕಡತೂರು ಗೇಟ್ ಬಳಿ ಗುರುವಾರ ಕಂಟೇನರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಲಕ್ಕೂರು ಗ್ರಾಮದ ಚಂದ್ರಪ್ಪ (39) ಮೃತರು ಎಂದು ಗುರುತಿಸಲಾಗಿದೆ.
ಮಾಲೂರು ಕಡೆಯಿಂದ ಕೋಲಾರ ರಸ್ತೆಯಲ್ಲಿ ಹೋಗುತ್ತಿದ್ದ ಕಂಟೇನರ್ ಬೈಕ್‌ಗೆ ಚಿಕ್ಕ ಕಡತೂರು ಗೇಟ್ ಬಳಿಯ ತಿರುವಿನಲ್ಲಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.