ADVERTISEMENT

ಅಪಘಾತ: ಇಬ್ಬರು ಯುವಕರ ಸಾವು

​ಪ್ರಜಾವಾಣಿ ವಾರ್ತೆ
Published 26 ಮೇ 2020, 1:43 IST
Last Updated 26 ಮೇ 2020, 1:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲಾರ: ನಗರದ ಹೊರವಲಯದ ಕೋಡಿಕಣ್ಣೂರು ಕೆರೆ ಏರಿಯಲ್ಲಿ ಸೋಮವಾರ ರಾತ್ರಿ ಬೈಕ್‌ ಮತ್ತು ಸರಕು ಸಾಗಣೆ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಶ್ರೀನಿವಾಸ್‌ (21) ಮತ್ತು ನಂದೀಶ್‌ (25) ಮೃತಪಟ್ಟವರು. ಸ್ನೇಹಿತರಾದ ಇವರು ಕೋಲಾರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ಶ್ರೀನಿವಾಸಪುರಕ್ಕೆ ಹೋಗಿದ್ದ ಇವರು ನಗರಕ್ಕೆ ವಾಪಸ್‌ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸರಕು ಸಾಗಣೆ ವಾಹನ ಇವರ ಬೈಕ್‌ಗೆ ಎದುರುಗಡೆಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಶ್ರೀನಿವಾಸ್‌ ಮತ್ತು ನಂದೀಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.