ADVERTISEMENT

ರೈತರಿಗೆ ಸಾಲ ಸೌಲಭ್ಯಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 13 ಮೇ 2022, 2:14 IST
Last Updated 13 ಮೇ 2022, 2:14 IST
ಬೇತಮಂಗಲ ಸಮೀಪದ ಎನ್.ಜಿ. ಹುಲ್ಕೂರು ಸರ್ಕಾರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕಿ ರೂಪಾ ಶಶಿಧರ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು
ಬೇತಮಂಗಲ ಸಮೀಪದ ಎನ್.ಜಿ. ಹುಲ್ಕೂರು ಸರ್ಕಾರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕಿ ರೂಪಾ ಶಶಿಧರ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು   

ಬೇತಮಂಗಲ: ‘ಕೆಜಿಎಫ್ ಕ್ಷೇತ್ರದ ಗ್ರಾಮೀಣ ಭಾಗದ ರೈತರಿಗೆ ಶೀಘ್ರವೇ ₹ 7 ಕೋಟಿ ಸಾಲ ವಿತರಿಸಲಾಗುವುದು’ ಎಂದು ಶಾಸಕಿ ಎಂ. ರೂಪಾ ಶಶಿಧರ್ ತಿಳಿಸಿದರು.

ಬೇತಮಂಗಲ ಹೊರವಲಯದ ಎನ್.ಜಿ. ಹುಲ್ಕೂರು ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರದ ವಿವಿಧ ಭಾಗದ ರೈತರಿಗೆ ಡಿಸಿಸಿ ಬ್ಯಾಂಕ್‌ನಿಂದ ಬಡ್ಡಿರಹಿತ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಶೀಘ್ರವೇ 1 ಸಾವಿರಕ್ಕೂ ಹೆಚ್ಚು ರೈತರಿಗೆ ಸಾಲ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಎನ್.ಜಿ. ಹುಲ್ಕೂರು ಗ್ರಾ.ಪಂ. ಅಧ್ಯಕ್ಷ ಸುನೀಲ್ ಕುಮಾರ್ ಮಾತನಾಡಿ, ಗ್ರಾ.ಪಂ. ವ್ಯಾಪ್ತಿಯ 12 ಗ್ರಾಮಗಳಿಗೆ ಸ್ಮಶಾನ ಇಲ್ಲ. ಇದರಿಂದ ಜನರು ಪರದಾಡುತ್ತಿದ್ದಾರೆ. ಶೀಘ್ರವೇ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ನಡೆಸಿ ಸ್ಮಶಾನಕ್ಕೆ ಜಾಗ ಗುರುತಿಸಬೇಕು ಎಂದು ಮನವಿ ಮಾಡಿದರು.

ಸೋಮವಾರ ರಾತ್ರಿ ತಾಲ್ಲೂಕಿನಲ್ಲಿ ಸುರಿದ ಮಳೆ ಹಾಗೂ ಗಾಳಿಗೆ ರೈತರ ಬೆಳೆಗಳು ನಷ್ಟಕ್ಕೀಡಾಗಿವೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ರೈತರು ದೂರಿದರು.

ತಹಶೀಲ್ದಾರ್ ಸುಜಾತಾ, ತಾ.ಪಂ. ಇಒ ಮಂಜುನಾಥ್, ಆಹಾರ ಇಲಾಖೆಯ ರಘು, ಕಂದಾಯ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ, ಸಿಡಿಪಿಒ ನಾಗರತ್ನಾ, ಗ್ರಾ.ಪಂ. ಉಪಾಧ್ಯಕ್ಷೆ ವೆಂಕಟಮ್ಮ, ಪಿಡಿಒ ವೆಂಕಟರಾಮರೆಡ್ಡಿ, ಏಜಾಜ್ ಪಾಷ, ಸದಸ್ಯರಾದ ನಾರಾಯಣಸ್ವಾಮಿ, ಶಾಮಲಮ್ಮ, ಎಪಿಎಂಸಿ ಅಧ್ಯಕ್ಷ ವಿಜಯರಾಘವ ರೆಡ್ಡಿ, ತಾ.ಪಂ. ಮಾಜಿ ಅಧ್ಯಕ್ಷರಾದ ಸುನಂದಾ ರಾಮಕೃಷ್ಣರೆಡ್ಡಿ, ಮಾಜಿ ಸದಸ್ಯ ಜಯರಾಮರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.