ಬಂಗಾರಪೇಟೆ: ವಿದ್ಯಾರ್ಥಿಗಳು ಶಾಲಾ ಆವರಣ ಪ್ರವೇಶಿಸಿದ ಕೂಡಲೇ ಥರ್ಮಲ್ ಸ್ಕ್ರೀನಿಂಗ್‌ನಿಂದ ಅವರ ದೇಹದ ಉಷ್ಣತೆ ಪರೀಕ್ಷಿಸಬೇಕು. ಸಾಬೂನು ಅಥವಾ ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಛಗೊಳಿಸಲು ಅವಕಾಶ ಕಲ್ಪಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ. ಕೆಂಪಯ್ಯ ಸೂಚಿಸಿದರು.
ವಿದ್ಯಾರ್ಥಿಗೆ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಲೆ, ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಎಲ್ಲೆಡೆ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತು ಮಾಡಬೇಕು. ತಪ್ಪದೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ವಿದ್ಯಾಗಮ ಯೋಜನೆಯಡಿ ಎಲ್ಲಾ ಶಾಲೆಗಳು ಆರಂಭಿಸಬೇಕಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ. ಮೊಬೈಲ್, ಇಂಟರ್‌ನೆಟ್ ಸೌಲಭ್ಯ ಇಲ್ಲದ ಬಡ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಕಲಿಕೆಯ ನಿರಂತರತೆ ಕಾಪಾಡಲು ಈ ಯೋಜನೆಯಿಂದ ಸಾಧ್ಯವಾಗಲಿದೆ. ಬಾಲಕಾರ್ಮಿಕ, ಬಾಲ್ಯವಿವಾಹ ತಡೆ, ಮಕ್ಕಳು ಶಾಲೆಯಿಂದ ಹೊರಗೆ ಉಳಿಯದಂತೆ ಖಚಿತಪಡಿಸಿಕೊಳ್ಳಲು ಸುಲಭ. ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.