ADVERTISEMENT

ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಸಲಹೆ: ಸಿ.ಎಚ್.ಗಂಗಾಧರ್

ಕಾನೂನು ಅರಿವು ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 3:39 IST
Last Updated 25 ಜನವರಿ 2022, 3:39 IST
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಮಹಿಳೆ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಕುರಿತು ಕೋಲಾರ ತಾಲ್ಲೂಕಿನ ತೊರದೇವಂಡಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದ ಕಾನೂನು ಅರಿವು ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಮಾತನಾಡಿದರು
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಮಹಿಳೆ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಕುರಿತು ಕೋಲಾರ ತಾಲ್ಲೂಕಿನ ತೊರದೇವಂಡಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದ ಕಾನೂನು ಅರಿವು ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಮಾತನಾಡಿದರು   

ಕೋಲಾರ: ‘ಮಕ್ಕಳಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುವುದು, ವಂಚಿಸುವುದು ಅಪರಾಧ. ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತವಾಗದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ತಿಳಿಸಿದರು.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಮಹಿಳೆ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಕುರಿತು ತಾಲ್ಲೂಕಿನ ತೊರದೇವಂಡಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಸಮಾಜದಲ್ಲಿ ಶೋಷಣಗೆ ಒಳಗಾದವರಿಗೆ ನ್ಯಾಯ ದೊರಕಿಸಲು ಪ್ರಾಧಿಕಾರ ಕೆಲಸ ಮಾಡುತ್ತಿದೆ. ವರ್ಷಕ್ಕೆ ₹ 3 ಲಕ್ಷಕ್ಕಿಂತ ಕಡಿಮೆ ಆದಾಯವಿರುವ ಬಡವರ ಪರವಾಗಿ ವಕೀಲರನ್ನು ನೇಮಕ ಮಾಡಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಹೆಣ್ಣು ಮಕ್ಕಳ ರಕ್ಷಣೆಗೆ ವಿಶೇಷ ಕಾಯ್ದೆಗಳಿವೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಶಿಕ್ಷೆ ವಿಧಿಸಬಹುದು. ಮಕ್ಕಳಿಗೆ ತೊಂದರೆಯಾದರೆ ಸಹಾಯವಾಣಿಗೆ ಕರೆ ಮಾಡಬೇಕು’ ಎಂದು ಹೇಳಿದರು.

ವಿಷಾದಕರ: ‘ಪೋಷಕರ ನಂತರ ಮಕ್ಕಳನ್ನು ರಕ್ಷಣೆ ಜವಾಬ್ದಾರಿ ಶಿಕ್ಷಕರ ಮೇಲಿದೆ. ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸಬೇಕು. ಬುದ್ಧಿವಂತರು ಇರುವ ದೇಶದಲ್ಲಿ ಈಗಲೂ ಮಕ್ಕಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾದಕರ. ನಾವು ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯದಲ್ಲಿ ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್ ಆತಂಕ ವ್ಯಕ್ತಪಡಿಸಿದರು.

ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ರಘುಪತಿಗೌಡ, ಉಪಾಧ್ಯಕ್ಷ ವೆಂಕಟಾಚಲಪತಿಗೌಡ, ಶಾಲೆಯ ಮುಖ್ಯಶಿಕ್ಷಕ ಕೆ.ಮುನಿಯಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಮುರಳಿಮೋಹನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.