ADVERTISEMENT

ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲು ಸಲಹೆ

ರಾಮಸಾಗರ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 4:35 IST
Last Updated 16 ಸೆಪ್ಟೆಂಬರ್ 2022, 4:35 IST
ಬೇತಮಂಗಲ ಸಮೀಪದ ರಾಮಸಾಗರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ಬೇತಮಂಗಲ ಸಮೀಪದ ರಾಮಸಾಗರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು   

ಬೇತಮಂಗಲ: ‘ಮಕ್ಕಳಲ್ಲಿ ಅಡಗಿರುವ ಪ್ರತಿಭೆಯ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ’ ಎಂದು ರಾಮಸಾಗರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೇಮಾರೆಡ್ಡಿ ನುಡಿದರು.

ಸಮೀಪದ ರಾಮಸಾಗರದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪ್ರಾಥಮಿಕ ಶಾಲಾ ಮಟ್ಟದಿಂದಲೇ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಬೇಕು. ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿಯಂತಹ ಸ್ವರ್ಧೆಗಳಲ್ಲಿ ಭಾಗವಹಿಸುವುದರಿಂದ ಸ್ವರ್ಧಾ ಮನೋಭಾವ ವೃದ್ಧಿಸಲಿದೆ ಎಂದರು.

ADVERTISEMENT

ವಿದ್ಯಾರ್ಥಿಗಳು ಸ್ವರ್ಧೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕಿವಿಮಾತು ಹೇಳಿದರು.

ಪ್ರತಿಭಾ ಕಾರಂಜಿಯ ವಿವಿಧ ಸ್ವರ್ಧೆಯಲ್ಲಿ ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಎಸ್‌ಡಿಎಂಸಿ ಉಪಾಧ್ಯಕ್ಷೆ ಆಶಾ, ಸದಸ್ಯರಾದ ಸರಸ್ವತಿ, ನವೀನ್ ಕುಮಾರ್, ಆಂಜನೇಯಲು, ಶ್ರೀರಾಮ್ ಗೌಡ, ಚಿರಂಜೀವಿ, ಪ್ರಭಾಕರ್, ನೌಕರರ ಸಂಘದ ಅಧ್ಯಕ್ಷ ವಿನೋದ್ ಬಾಬು, ಶ್ರೀನಿವಾಸ್ ಮೂರ್ತಿ, ಸಿಆರ್‌ಪಿ ರಂಜಿತ್, ತ್ಯಾಗರಾಜ್, ಕೃಷ್ಣಮೂರ್ತಿ, ಬಿಆರ್‌ಪಿ ಶಂಕರ್, ಶಿಕ್ಷಕರಾದ ಶ್ರೀನಿವಾಸ್, ಸುರೇಶ್, ರಾಮು, ಶಾಂತಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.