ADVERTISEMENT

ಕೈದೋಟ ಸಂಸ್ಕೃತಿಗೆ ಹಿಂದಿರುಗಲು ಸಲಹೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 1:53 IST
Last Updated 10 ಡಿಸೆಂಬರ್ 2021, 1:53 IST
ಶ್ರೀನಿವಾಸಪುರ ತಾಲ್ಲೂಕಿನ ಮಲ್ದೇಪಲ್ಲಿ ಗ್ರಾಮದಲ್ಲಿ ಗುರುವಾರ ಆಹಾರ ಮೇಳ ನಡೆಯಿತು
ಶ್ರೀನಿವಾಸಪುರ ತಾಲ್ಲೂಕಿನ ಮಲ್ದೇಪಲ್ಲಿ ಗ್ರಾಮದಲ್ಲಿ ಗುರುವಾರ ಆಹಾರ ಮೇಳ ನಡೆಯಿತು   

ಶ್ರೀನಿವಾಸಪುರ: ಜನರು ಆರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ಕೈತೋಟ ಸಂಸ್ಕೃತಿಗೆ ಹಿಂದಿರುಗಬೇಕು. ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ಆರೋಗ್ಯ ಸಹಾಯಕಿ ಭಾರ್ಗವಿ ಹೇಳಿದರು.

ತಾಲ್ಲೂಕಿನ ಮಲ್ದೇಪಲ್ಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗುರುವಾರ ಏರ್ಪಡಿಸಿದ್ದ ಆಹಾರ ಮೇಳದಲ್ಲಿ ಅವರು ಮಾತನಾಡಿದರು.

ಸಮತೋಲನ ಆಹಾರ ಸೇವಿಸಿದರೆ ಆರೋಗ್ಯ ಸಮಸ್ಯೆ ಕಾಡುವುದಿಲ್ಲ ಎಂದು ಹೇಳಿದರು.

ADVERTISEMENT

ಆಹಾರದಲ್ಲಿ ತರಕಾರಿ ಮತ್ತು ಸೊಪ್ಪು ಹೆಚ್ಚಾಗಿ ಇರುವಂತೆ ನೋಡಿಕೊಳ್ಳಬೇಕು. ಗ್ರಾಮೀಣ ಜನರು ತಮ್ಮಲ್ಲಿ ಲಭ್ಯವಿರುವ ಆಹಾರ ಧಾನ್ಯ ಮತ್ತು ಕಾಳುಗಳಿಂದ ಪೌಷ್ಟಿಕ ಆಹಾರ ತಯಾರಿಸಿಕೊಳ್ಳಬಹುದಾಗಿದೆ ಎಂದರು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಾಗರಾಳ, ನಾಗರತ್ನಮ್ಮ, ಈರಮ್ಮ, ಮಂಜುಳಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.