ADVERTISEMENT

ಅಕ್ರಂ ಪಾಷ ಕೋಲಾರದ ನೂತನ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2023, 15:56 IST
Last Updated 19 ಜೂನ್ 2023, 15:56 IST
ಅಕ್ರಂ ಪಾಷ
ಅಕ್ರಂ ಪಾಷ   

ಕೋಲಾರ: ಅಕ್ರಂ ಪಾಷ ಅವರನ್ನು ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ವರೆಗೆ ಜಿಲ್ಲಾಧಿಕಾರಿಯಾಗಿದ್ದ ವೆಂಕಟ್‍ ರಾಜಾ ಅವರನ್ನು ಕೊಡಗು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿದೆ.

ಅಕ್ರಂ ಪಾಷ ಈ ಮೊದಲು ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ವೆಂಕಟ್‍ ರಾಜಾ ವರ್ಷಕ್ಕೂ ಅಧಿಕ ಸಮಯ ಕೋಲಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು 2022ರ ಜನವರಿ 25ರಂದು ಅಧಿಕಾರ ಸ್ವೀಕರಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.