ADVERTISEMENT

ಕೋಲಾರ: ಆನ್‌ಲೈನ್‌ನಲ್ಲಿ ಮದ್ಯ ಮಾರಾಟ, ತರಾತುರಿ ತೀರ್ಮಾನವಿಲ್ಲ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 15:50 IST
Last Updated 2 ಸೆಪ್ಟೆಂಬರ್ 2020, 15:50 IST

ಕೋಲಾರ: ‘ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಮಾಡುವ ವಿಚಾರವಾಗಿ ತರಾತುರಿಯಲ್ಲಿ ತೀರ್ಮಾನ ಕೈಗೊಳ್ಳುವುದಿಲ್ಲ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರುತ್ತೇವೆ’ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು.

ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶದ ಇತರೆ ರಾಜ್ಯಗಳಲ್ಲಿ ಆನ್‌ಲೈನ್‌ ಮೂಲಕ ಮದ್ಯದ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅಂತಹ ರಾಜ್ಯಗಳಿಗೆ ಖುದ್ದು ಭೇಟಿ ಕೊಟ್ಟು ಪರಿಶೀಲನೆ ನಡೆಸಿ ವರದಿ ನೀಡಲು ಅಧಿಕಾರಿಗಳ ತಂಡ ರಚಿಸಲಾಗಿದೆ’ ಎಂದು ಹೇಳಿದರು.

‘ಆನ್‌ಲೈನ್‌ನಲ್ಲಿ ಮದ್ಯದ ವಹಿವಾಟಿಗೆ ಬಾರ್‌ ಮಾಲೀಕರ ಅಸೋಸಿಯೇಷನ್‌ ವಿರೋಧ ವ್ಯಕ್ತಪಡಿಸಿದೆ. ಜತೆಗೆ ನಗರ ಪ್ರದೇಶದಲ್ಲಿ ಮಾತ್ರ ಆನ್‌ಲೈನ್‌ನಲ್ಲಿ ಮದ್ಯದ ವಹಿವಾಟು ನಡೆಯುತ್ತದೆ. ಹಳ್ಳಿಗಳಲ್ಲಿ ವಹಿವಾಟು ಸಾಧ್ಯವಿಲ್ಲ. ಖರೀದಿಗೆ ಸೇವಾ ಶುಲ್ಕ ಬೀಳುತ್ತದೆ. ಆನ್‌ಲೈನ್‌ ವ್ಯವಸ್ಥೆಯಲ್ಲಿ ಮದ್ಯ ಮಾರಾಟ ಹೆಚ್ಚಳ ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.

ADVERTISEMENT

‘ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ನಡೆಸುವುದರಿಂದ 18 ವರ್ಷದೊಳಗಿನ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಸಮಸ್ಯೆಯಾಗುತ್ತದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.