ADVERTISEMENT

ಅಂಬೇಡ್ಕರ್‌ ಆದರ್ಶ ಅನುಕರಣೀಯ

ಮಾಲೂರು: ಸಂವಿಧಾನ ಶಿಲ್ಪಿ ಪ್ರತಿಮೆಗೆ ಪುಷ್ಪ ನಮನ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 4:57 IST
Last Updated 7 ಡಿಸೆಂಬರ್ 2021, 4:57 IST
ಡಾ.ಬಿ.ಆರ್. ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮಾಲೂರು ಪಟ್ಟಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಶಾಸಕ ಕೆ.ವೈ. ನಂಜೇಗೌಡ ಪುಷ್ಪ ನಮನ ಸಲ್ಲಿಸಿದರು. ಕೆಪಿಸಿಸಿ ಕಾರ್ಯದರ್ಶಿ ಸಿ. ಲಕ್ಷ್ಮಿನಾರಾಯಣ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸಂತೇಹಳ್ಳಿ ನಾರಾಯಣಸ್ವಾಮಿ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯನರಸಿಂಹ, ಪುರಸಭಾ ಸದಸ್ಯ ಮಂಜುನಾಥ್ ಹಾಜರಿದ್ದರು
ಡಾ.ಬಿ.ಆರ್. ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮಾಲೂರು ಪಟ್ಟಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಶಾಸಕ ಕೆ.ವೈ. ನಂಜೇಗೌಡ ಪುಷ್ಪ ನಮನ ಸಲ್ಲಿಸಿದರು. ಕೆಪಿಸಿಸಿ ಕಾರ್ಯದರ್ಶಿ ಸಿ. ಲಕ್ಷ್ಮಿನಾರಾಯಣ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸಂತೇಹಳ್ಳಿ ನಾರಾಯಣಸ್ವಾಮಿ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯನರಸಿಂಹ, ಪುರಸಭಾ ಸದಸ್ಯ ಮಂಜುನಾಥ್ ಹಾಜರಿದ್ದರು   

ಮಾಲೂರು: ‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಾಗಿ ಪ್ರಸ್ತುತ ಪ್ರತಿಯೊಂದು ಸಮುದಾಯಗಳಿಗೂ ಮೀಸಲಾತಿ ಸೌಲಭ್ಯ ಸಿಕ್ಕಿದೆ’ ಎಂದು ಶಾಸಕ ಕೆ.ವೈ. ನಂಜೇಗೌಡ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸೋಮವಾರ ಪಟ್ಟಣದ ಬಸ್‌ನಿಲ್ದಾಣದ ಉದ್ಯಾನದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಸಮಾಜದಲ್ಲಿನ ಅಂಧಕಾರವನ್ನು ಹೋಗಲಾಡಿಸಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಜನರಲ್ಲಿ ಮನೆ ಮಾಡಿರುವ ಮೌಢ್ಯದ ವಿರುದ್ಧ ಹೋರಾಟ ಮಾಡಿದರು. ಜತೆಗೆ, ಸಂವಿಧಾನ ರಚನೆ ಮಾಡಿ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸಿದ್ದಾರೆ ಎಂದರು.

ADVERTISEMENT

ಪುರಸಭಾ ಮಾಜಿ ಅಧ್ಯಕ್ಷ ಎನ್.ವಿ. ಮುರಳೀಧರ್ ಮಾತನಾಡಿ, ದೇಶದ ಬೃಹತ್ ಸಂವಿಧಾನವನ್ನು ಬೇರೆ ಯಾವ ದೇಶದಲ್ಲೂ ಕಾಣಲು ಸಾಧ್ಯವಿಲ್ಲ. ಅಂಬೇಡ್ಕರ್‌ ಅವರು ಸಮಾನತೆ, ಶಿಕ್ಷಣ, ಹೋರಾಟದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ ಮಹಾನ್ ಮಾನವತಾವಾದಿ ಎಂದು
ಬಣ್ಣಿಸಿದರು.

ಅಂಬೇಡ್ಕರ್ ಅವರ ಸಿದ್ಧಾಂತ, ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದರಂತೆ ನಡೆದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಸಿ. ಲಕ್ಷ್ಮಿನಾರಾಯಣ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸಂತೇಹಳ್ಳಿ ನಾರಾಯಣಸ್ವಾಮಿ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯನರಸಿಂಹ, ಪುರಸಭಾ ಸದಸ್ಯ ಮಂಜುನಾಥ್, ಸಾಹಿತಿ ಗಂಗಪ್ಪ ತಳವಾರ್, ಮುಖಂಡರಾದ ಎಸ್.ಆರ್. ರಂಗಪ್ಪ, ಎಂ. ಅಂಜಿನಪ್ಪ, ಎ. ಅಶ್ವಥ್‌ ರೆಡ್ಡಿ, ಮೈಲಾಂಡಹಳ್ಳಿ ನಾರಾಯಣಸ್ವಾಮಿ, ಚೌಡಪ್ಪ, ಡಿ.ಟಿ. ಮಂಜುನಾಥ್, ಬಾಬು, ತಿಮ್ಮರಾಯಪ್ಪ, ಮೂಗಪ್ಪ, ಬಿ.ವೈ. ಲೋಕೇಶ್, ಕೋಟೆ ಮುನಿರಾಜು, ಜಾಕಿ, ಮಾಸ್ತಿ ಪ್ರವೀಣ್
ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.