
ಮುಳಬಾಗಿಲು ತಾಲ್ಲೂಕಿನ ಎನ್.ವೆಂಕಟಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಹಾಕಿದ್ದ ಬೀಗವನ್ನು ಅಧಿಕಾರಿಗಳು ತೆಗೆಸಿದರು
ಮುಳಬಾಗಿಲು: ತಾಲ್ಲೂಕಿನ ನಂಗಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎನ್.ವೆಂಕಟಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಹಾಕಿದ್ದ ಬೀಗವನ್ನು ಸೋಮವಾರ ತೆರವುಗೊಳಿಸಲಾಗಿದೆ.
ಎನ್.ವೆಂಕಟಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆಯರನ್ನಾಗಿ ಗ್ರಾಮದ ಸ್ಥಳೀಯ ಮಹಿಳೆರಿಗೆ ನೀಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಸೆ.12 ರಂದು ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟಿಸಿದ್ದರು. ಈ ಬಗ್ಗೆ ಸೆ.13ರಂದು ಪ್ರಜಾವಾಣಿಯಲ್ಲಿ ‘ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ’ ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿ ಹೇಳಿ ಸೋಮವಾರ ಅಂಗನವಾಡಿ ಕೇಂದ್ರದ ಬೀಗವನ್ನು ತೆರವುಗೊಳಿಸಿದ್ದಾರೆ.
ಮುಳಬಾಗಿಲು ತಾಲ್ಲೂಕಿನ ಎನ್.ವೆಂಕಟಾಪುರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ ಸುದ್ದಿ ಪ್ರಕಟವಾಗಿರುವುದು
ಸುದ್ದಿಯನ್ನು ನೋಡಿದ ಶಿಶು ಅಭಿವೃದ್ಧಿ ಇಲಾಖೆಯ ತಾಲ್ಲೂಕು ಅಧಿಕಾರಿ ರಮ್ಯ ಅವರು ಸೆ.16 ರಂದು ಗ್ರಾಮಕ್ಕೆ ತೆರಳಿ, ಯಾವುದೇ ಕಾರಣಕ್ಕೂ ಅಂಗನವಾಡಿಗೆ ಬೀಗ ಹಾಕಬಾರದು ಎಂದು ಗ್ರಾಮಸ್ಥರಿಗೆ ಸರ್ಕಾರದ ನಿಯಮಾವಳಿಗಳನ್ನು ತಿಳಿಸಿ ಅಂಗನವಾಡಿ ಬೀಗ ತೆರೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.