ADVERTISEMENT

ಅಂಗನವಾಡಿ ಮೇಲ್ಛಾವಣಿ ಕುಸಿತ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2019, 10:36 IST
Last Updated 29 ನವೆಂಬರ್ 2019, 10:36 IST
ಕೋಲಾರದ ಪಿ.ಸಿ ಬಡಾವಣೆಯಲ್ಲಿ ಗುರುವಾರ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಮಕ್ಕಳು ಕೂರುವ ಜಾಗದಲ್ಲಿ ಬಿದ್ದಿರುವುದು.
ಕೋಲಾರದ ಪಿ.ಸಿ ಬಡಾವಣೆಯಲ್ಲಿ ಗುರುವಾರ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಮಕ್ಕಳು ಕೂರುವ ಜಾಗದಲ್ಲಿ ಬಿದ್ದಿರುವುದು.   

ಕೋಲಾರ: ನಗರದ ಪಿ.ಸಿ ಬಡಾವಣೆಯಲ್ಲಿ ಗುರುವಾರ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದ್ದು, ಅದೃಷ್ಟವಶಾತ್‌ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ ಸುಮಾರು 10 ಮಕ್ಕಳಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಕ್ಕಳು ಊಟ ಮಾಡಿ ಆಟವಾಡಲು ಕೇಂದ್ರದಿಂದ ಹೊರ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿದೆ.

ತುಂಬಾ ಹಳೆಯದಾದ ಈ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಆದರೂ ಇದೇ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರದ ಮುಂದುವರಿಸಲಾಗಿದೆ. ಅಂಗನವಾಡಿ ಕಟ್ಟಡ ದುರಸ್ತಿಗೆ ಸ್ಥಳೀಯರು ಹಲವು ಬಾರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಕಟ್ಟಡ ದುರಸ್ತಿ ಮಾಡಿಸದೆ ನಿರ್ಲಕ್ಷ್ಯ ತೋರಿದ್ದರು.

ADVERTISEMENT

ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್‌ ಕುಸಿದು ಮಕ್ಕಳು ಕೂರುವ ಜಾಗದಲ್ಲೇ ಬಿದ್ದಿದ್ದು, ಘಟನೆಯಿಂದ ಪೋಷಕರು ಆತಂಕಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.