ADVERTISEMENT

ಗುರುಮೂರ್ತಿ ಯಲ್ಲಮ್ಮ ದೇಗುಲದ ವಾರ್ಷಿಕೋತ್ಸವ

ಮರವಳ್ಳಿ: ತಲೆ ಮೇಲೆ ತೆಂಗಿನಕಾಯಿ ಒಡೆದು ಭಕ್ತಿ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 12 ಮೇ 2022, 5:04 IST
Last Updated 12 ಮೇ 2022, 5:04 IST
ಬಂಗಾರಪೇಟೆ ತಾಲ್ಲೂಕಿನ ಮರವಳ್ಳಿಯಲ್ಲಿ ಬುಧವಾರ ಯಲ್ಲಮ್ಮ ದೇವಾಲಯದ ವಾರ್ಷಿಕೋತ್ಸವದಲ್ಲಿ ತಲೆಯ ಮೇಲೆ ತೆಂಗಿನಕಾಯಿ ಒಡೆಯಲಾಯಿತು
ಬಂಗಾರಪೇಟೆ ತಾಲ್ಲೂಕಿನ ಮರವಳ್ಳಿಯಲ್ಲಿ ಬುಧವಾರ ಯಲ್ಲಮ್ಮ ದೇವಾಲಯದ ವಾರ್ಷಿಕೋತ್ಸವದಲ್ಲಿ ತಲೆಯ ಮೇಲೆ ತೆಂಗಿನಕಾಯಿ ಒಡೆಯಲಾಯಿತು   

ಬಂಗಾರಪೇಟೆ: ತಾಲ್ಲೂಕಿನ ಮರವಳ್ಳಿಯ ಗುರುಮೂರ್ತಿ ಯಲ್ಲಮ್ಮ ದೇವಾಲಯದ 5ನೇ ವರ್ಷದ ವಾರ್ಷಿಕೋತ್ಸವದ ಆರಾಧನೆ ಹಾಗೂ ತಲೆಯ ಮೇಲೆ ತೆಂಗಿನಕಾಯಿ ಒಡೆಯುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ವಾರ್ಷಿಕೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವರಿಗೆ ಹಲವು ರೀತಿಯ ಪೂಜಾ ಕಾರ್ಯಕ್ರಮಗಳು ನಡೆದವು. ವಿಗ್ರಹಕ್ಕೆ ಅಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅರ್ಚನೆ, ನೈವೇದ್ಯ, ದೇವರ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಿ ತೀರ್ಥ ಪ್ರಸಾದ, ಮಹಾಮಂಗಳಾರತಿ
ನಡೆಯಿತು.

ದೇವಾಲಯದ ಮುಂಭಾಗದಲ್ಲಿ ಕಲಾ ತಂಡಗಳಿಂದ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪುರಾತನ ಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಬಸವಣ್ಣ ಹಾಗೂ ವೀರಕುಮಾರರ ತಲೆಯ ಮೇಲೆ ತೆಂಗಿನಕಾಯಿ ಒಡೆಯುವ ಪವಾಡ ನಡೆಯಿತು.

ADVERTISEMENT

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು. ದೇವಾಲಯಕ್ಕೆ ಬಂದಂತಹ ಕುಲಬಾಂಧವರಿಗೆ ಅನ್ನದಾಸೋಹ ಕಾರ್ಯಕ್ರಮ
ಏರ್ಪಡಿಸಲಾಗಿತ್ತು.

ದೇವಾಲಯದ ಸಿದ್ದಲಿಂಗ ಸ್ವಾಮೀಜಿ, ಅಧ್ಯಕ್ಷ ಅಪ್ಪಯ್ಯಗೌಡ, ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಚಂದ್ರಶೇಖರ್, ಪಾರ್ವತಿ, ನಾಗರಾಜ್, ಲಕ್ಷ್ಮಿಕಾಂತ್, ಗೋವಿಂದಪ್ಪ, ಚಂದ್ರಶೇಖರ್, ಪೂಜಾರಿ ನಾರಾಯಣಸ್ವಾಮಿ, ಮುನಿಯಪ್ಪ, ಎಲ್ಲಪ್ಪ, ಬಾಬು ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ
ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.