ADVERTISEMENT

ಅರಾಭಿಕೊತ್ತನೂರು: ಬ್ರಹ್ಮ ರಥೋತ್ಸವದ ವೈಭವ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 15:56 IST
Last Updated 19 ಫೆಬ್ರುವರಿ 2021, 15:56 IST
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಶುಕ್ರವಾರ ಪ್ರಸನ್ನ ಸೋಮನಾಥೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ವೈಭವದಿಂದ ನಡೆಯಿತು.
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಶುಕ್ರವಾರ ಪ್ರಸನ್ನ ಸೋಮನಾಥೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ವೈಭವದಿಂದ ನಡೆಯಿತು.   

ಕೋಲಾರ: ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಪ್ರಸನ್ನ ಸೋಮನಾಥೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಶುಕ್ರವಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಶಾಸಕ ಕೆ.ಶ್ರೀನಿವಾಸಗೌಡ, ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್.ಸುದರ್ಶನ್‌ ರಥೋತ್ಸವಕ್ಕೆ ಚಾಲನೆ ನೀಡಿದರು.

ಬೃಹತ್ ಹೂವಿನ ಹಾರಗಳಿಂದ ಅಲಂಕೃತವಾಗಿದ್ದ ರಥ ಹೊರಡುತ್ತಿದ್ದಂತೆ ಸಾವಿರಾರು ಭಕ್ತರು ಹಣ್ಣು ದವಳ ಎಲೆ ಅರ್ಪಿಸಿ ಕೃತಾರ್ಥರಾದರು. ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ರಥೋತ್ಸವದ ಅಂಗವಾಗಿ ಗ್ರಾಮದ ಸಮುದಾಯ ಭವನದಲ್ಲಿ ಅನ್ನಸಂತರ್ಪಣೆ ನಡೆಸಲಾಯಿತು.

ADVERTISEMENT

ಜಾನಪದ ಕಲಾತಂಡಗಳು ನೀಡಿದ ವೀರಗಾಸೆ ಕುಣಿತ, ಗಾರುಡಿ ಗೊಂಬೆ, ತಮಟೆ ವಾದ್ಯ, ಡೊಳ್ಳು ಕುಣಿತ, ಕೀಲುಕುದುರೆ, ಹಗಲುವೇಷ  ಪ್ರದರ್ಶನವು ಜನರ ಮನಸೂರೆಗೊಂಡಿತು.

ಸಂಕ್ರಾಂತಿ ಹಬ್ಬ ಆಚರಿಸದ ಈ ಗ್ರಾಮದ ಜನ ರಥಸಪ್ತಮಿಯ ರಥೋತ್ಸವಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಗ್ರಾಮದ ಬೆಟ್ಟಗಳಲ್ಲಿರುವ ಚಿರತೆಗಳನ್ನು ಭೇಟೆಯಾಡಿ ಗ್ರಾಮದಲ್ಲಿ ಮೆರವಣಿಗೆ ಮಾಡಿ ಸಂಕ್ರಾಂತಿ ವಿಶಿಷ್ಟವಾಗಿ ಆಚರಿಸಿಕೊಂಡು ಬರುತ್ತಿದ್ದರು. ಆದರೆ, ಅರಣ್ಯ ಇಲಾಖೆ ಆದೇಶದಂತೆ ಗ್ರಾಮಸ್ಥರು ಚಿರತೆ ಭೇಟೆ ಕೈಬಿಟ್ಟು, ಸೋಮನಾಥೇಶ್ವರ ಸ್ವಾಮಿಯ ರಥೋತ್ಸವವನ್ನೇ ವೈಭವದಿಂದ ಆಚರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.