ADVERTISEMENT

ಪ್ರವಾಹ ಸಂತ್ರಸ್ತರ ಸಹಾಯನಿಧಿಗೆ ನೆರವು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 15:11 IST
Last Updated 13 ಸೆಪ್ಟೆಂಬರ್ 2019, 15:11 IST
ಮುಳಬಾಗಿಲು ತಾಲ್ಲೂಕು ಆರ್ಯ ಈಡಿಗರ ಸಂಘದ ಸದಸ್ಯರು ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ಸಹಾಯನಿಧಿಗಾಗಿ ಕೋಲಾರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರಿಗೆ ₹ 1 ಲಕ್ಷ ಮೊತ್ತದ ಚೆಕ್‌ ಹಸ್ತಾಂತರಿಸಿದರು.
ಮುಳಬಾಗಿಲು ತಾಲ್ಲೂಕು ಆರ್ಯ ಈಡಿಗರ ಸಂಘದ ಸದಸ್ಯರು ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ಸಹಾಯನಿಧಿಗಾಗಿ ಕೋಲಾರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರಿಗೆ ₹ 1 ಲಕ್ಷ ಮೊತ್ತದ ಚೆಕ್‌ ಹಸ್ತಾಂತರಿಸಿದರು.   

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಆರ್ಯ ಈಡಿಗರ ಸಂಘದ ಸದಸ್ಯರು ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ಸಹಾಯನಿಧಿಗಾಗಿ ಇಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರಿಗೆ ₹ 1 ಲಕ್ಷ ಮೊತ್ತದ ಚೆಕ್‌ ಹಸ್ತಾಂತರಿಸಿದರು.

ಸಂಘದ ಅಧ್ಯಕ್ಷ ನಾರಾಯಣಪ್ಪ ಮಾತನಾಡಿ, ‘ರಾಜ್ಯದ 22 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಆ ಭಾಗದ ಜನ ಮನೆ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಪ್ರತಿಯೊಬ್ಬರು ಅವರಿಗೆ ನೆರವು ನೀಡಿ ಹೊಸ ಬದುಕು ಕಟ್ಟಿಕೊಳ್ಳುವ ಅವಕಾಶ ಕಲ್ಪಿಸಬೇಕು’ ಎಂದು ಹೇಳಿದರು.

‘ಸರ್ಕಾರದಿಂದ ಮಾತ್ರ ಎಲ್ಲಾ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವುದು ಅಸಾಧ್ಯ. ಈ ಕಾರ್ಯಕ್ಕೆ ಜನರೂ ಸರ್ಕಾರದೊಂದಿಗೆ ಕೈಜೋಡಿಸಬೇಕು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರದ ಬೆನ್ನಿಗೆ ನಿಂತು ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ಸ್ಪಂದಿಸಬೇಕು. ಪ್ರವಾಹ ಪೀಡಿತರಿಗೆ ಸಂಘದಿಂದ ಮತ್ತಷ್ಟು ನೆರವು ನೀಡುತ್ತೇವೆ’ ಎಂದರು.

ADVERTISEMENT

‘ಜಿಲ್ಲೆಯ ಜನ, ಉದ್ದಿಮೆದಾರರು ಮತ್ತು ಸಂಘ- ಸಂಸ್ಥೆಗಳು ನೀಡಿದ ಹಣಕಾಸು ನೆರವಿನಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಈಗಾಗಲೇ ಕೋಟ್ಯಂತರ ರೂಪಾಯಿ ಜಮಾ ಮಾಡಲಾಗಿದೆ. ಪರಿಹಾರದ 2ನೇ ಕಂತನ್ನು ಶೀಘ್ರದಲ್ಲೇ ರವಾನಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ವಿವರಿಸಿದರು.

ಮುಳಬಾಗಿಲು ತಾಲ್ಲೂಕು ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಆರ್.ಶ್ರೀನಿವಾಸಪ್ಪ, ಸದಸ್ಯರಾದ ಸೀತಾರಾಮ್, ವಿಶ್ವನಾಥ್, ಶಂಕರಪ್ಪ, ಆದಿನಾರಾಯಣ, ಶ್ರೀನಿವಾಸ್, ಮುನಿರತ್ನ, ರವಿಕುಮಾರ್, ರಾಮಚಂದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.