ADVERTISEMENT

ವಿದ್ಯಾರ್ಥಿಗಳು–ರೋಗಿಗಳಿಗೆ ನೆರವು: ಎಂ.ಗೋವಿಂದಗೌಡ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 16:07 IST
Last Updated 9 ಏಪ್ರಿಲ್ 2021, 16:07 IST
ಮನ್ವಂತರ ಜನ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ ಕೋಲಾರದಲ್ಲಿ ಶುಕ್ರವಾರ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ಅವರಿಗೆ ಆರ್ಥಿಕ ನೆರವಿನ ಚೆಕ್‌ ವಿತರಿಸಿದರು.
ಮನ್ವಂತರ ಜನ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ ಕೋಲಾರದಲ್ಲಿ ಶುಕ್ರವಾರ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ಅವರಿಗೆ ಆರ್ಥಿಕ ನೆರವಿನ ಚೆಕ್‌ ವಿತರಿಸಿದರು.   

ಕೋಲಾರ: ‘ಬಡ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಟ್ರಸ್ಟ್ ಮೂಲಕ ಕೈಲಾದಷ್ಟು ಆರ್ಥಿಕ ನೆರವು ನೀಡಲಾಗುವುದು’ ಎಂದು ಮನ್ವಂತರ ಜನ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಅಕ್ಷತಾ ಅವರ ವಿದ್ಯಾಭ್ಯಾಸಕ್ಕೆ ಇಲ್ಲಿ ಶುಕ್ರವಾರ ಹಣಕಾಸು ನೆರವು ನೀಡಿ ಮಾತನಾಡಿ, ‘ಕಳೆದ 2 ದಶಕದಿಂದ ಬಡವರಿಗೆ ಸಹಾಯ ಮಾಡುತ್ತಿದ್ದೇನೆ. 3 ವರ್ಷಗಳಿಂದ ಮನ್ವಂತರ ಜನ ಸೇವಾ ಟ್ರಸ್ಟ್ ಮೂಲಕ ಬಡ ವಿದ್ಯಾರ್ಥಿಗಳು, ಕಲಾವಿದರು ಹಾಗೂ ಅಸಹಾಯಕರಿಗೆ ಸಹಾಯಹಸ್ತ ಚಾಚಿದ್ದೇವೆ’ ಎಂದು ಹೇಳಿದರು.

‘ಟ್ರಸ್ಟ್‌ನ ನೆರವಿಗೆ ಅರ್ಹರಿರುವ ಫಲಾನುಭವಿಗಳನ್ನು ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಅನಂತರಾಮ್‌ ಗುರುತಿಸುತ್ತಾರೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿಯಲು ಹೆಚ್ಚಿನ ಆದ್ಯತೆ ನೀಡುತ್ತೇವೆ’ ಎಂದು ಭರವಸೆ ನೀಡಿದರು.

ADVERTISEMENT

‘ಕೋವಿಡ್‌ನಿಂದ ಬಡ ಜನರಿಗೆ ಹೆಚ್ಚಿನ ತೊಂದರೆಯಾಗಿದೆ. ಹಿಂದಿನ ವರ್ಷ ಕೊರೊನಾ ಆತಂಕದ ನಡುವೆಯೂ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗಿದೆ. ಈ ವರ್ಷ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.