ADVERTISEMENT

ಉತ್ತರ ವಿ.ವಿ: 48 ಗಂಟೆಗಳಲ್ಲಿ ಬಿ.ಎಡ್ ಪರೀಕ್ಷೆ ಫಲಿತಾಂಶ; ಪ್ರೊ.ಎನ್.ಲೋಕನಾಥ್

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 6:55 IST
Last Updated 13 ಅಕ್ಟೋಬರ್ 2025, 6:55 IST
ಪ್ರೊ.ಎನ್.ಲೋಕನಾಥ್
ಪ್ರೊ.ಎನ್.ಲೋಕನಾಥ್   

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಬಿ.ಎಡ್ 4ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ 48 ಗಂಟೆಗಳಲ್ಲಿ ಪ್ರಕಟಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಲೋಕನಾಥ್ ತಿಳಿಸಿದ್ದಾರೆ.

ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಒಟ್ಟು 34 ಬಿ.ಎಡ್ ಕಾಲೇಜುಗಳಿದ್ದು, 2,610ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರಲ್ಲಿ ಶೇ 98 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದಿದ್ದಾರೆ.

4ನೇ ಸೆಮಿಸ್ಟರ್ ಪರೀಕ್ಷೆ ಸೆ.29 ರಂದು ಆರಂಭವಾಗಿ ಅ.8 ರಂದು ಮುಕ್ತಾಯವಾಗಿತ್ತು. ಆ ಬಳಿಕ ಕೇವಲ 48 ಗಂಟೆಗಳಲ್ಲಿ ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಫಲಿತಾಂಶ ಶೀಘ್ರ ಪ್ರಕಟದಿಂದಾಗಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಹಾಗೂ ತಮ್ಮ ವೃತ್ತಿಜೀವನ ಆರಂಭಿಸಿ ಬದುಕು ಕಟ್ಟಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಕಾರಣವಾದ ಎಲ್ಲಾ ಸಂಯೋಜಿತ ಬಿ.ಎಡ್ ಕಾಲೇಜುಗಳ ಪ್ರಾಂಶುಪಾಲರು, ಅಧ್ಯಾಪಕರು, ವಿಶ್ವವಿದ್ಯಾಲಯ ಸಿಬ್ಬಂದಿ, ಕಸ್ಟೋಡಿಯನ್‍, ಕುಲಪತಿ ಪ್ರೊ.ನಿರಂಜನವಾನಳ್ಳಿ, ಕುಲಸಚಿವ ಶ್ರೀಧರ್ ಅವರಿಗೆ ಧನ್ಯವಾದ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.