ADVERTISEMENT

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಘಟಿಕೋತ್ಸವ: 41 ಅಭ್ಯರ್ಥಿಗಳಿಗೆ ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 15 ಜುಲೈ 2022, 5:44 IST
Last Updated 15 ಜುಲೈ 2022, 5:44 IST
   

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದ್ವಿತೀಯ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್‌ ಗಳಿಸಿದ 41 ಅಭ್ಯರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಿದರು.

ನಗರದ ಹೊರವಲಯದಲ್ಲಿರುವ ನಂದಿನಿ ಪ್ಯಾಲೇಸ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ ಪದವಿ ಸ್ವೀಕರಿಸಿ ಸಂಭ್ರಮಿಸಿದರು. 18,064 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಸ್ನಾತಕ ಪದವಿಯ 11 ಅಭ್ಯರ್ಥಿ, ಸ್ನಾತಕೋತ್ತರ ಪದವಿಯ 28, ಬಿ.ಇಡಿ ಮತ್ತು ಬಿಪಿ.ಇಡಿಯ ಒಬ್ಬ ಅಭ್ಯರ್ಥಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. 7,054 ಪುರುಷರು ಹಾಗೂ 11,010 ಮಹಿಳೆಯರು ಪದವಿ ಸ್ವೀಕರಿಸಿದರು.

ADVERTISEMENT

ಬೆಂಗಳೂರಿನ ಜಯದೇವ ಹೃದ್ರೋಗ ಹಾಗೂ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಪಾಲ್ಗೊಂಡಿದ್ದರು.

ವಿಶ್ವವಿದ್ಯಾಲಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ, ಕುಲಸಚಿವ (ಆಡಳಿತ) ಡಾ.ವಿ.ವೆಂಕಟೇಶಮೂರ್ತಿ, ಕುಲಸಚಿವ (ಮೌಲ್ಯಮಾಪನ) ಡಾ.ಡೊಮಿನಿಕ್‌ ಡಿ. ಹಾಗೂ ಡೀನ್‌ ಡಾ.ಡಿ.ಕುಮುದಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.