ADVERTISEMENT

ಜುಲೈ 15ಕ್ಕೆ ಬೆಂಗಳೂರು ಉತ್ತರ ವಿ.ವಿ ಘಟಿಕೋತ್ಸವ

​ಪ್ರಜಾವಾಣಿ ವಾರ್ತೆ
Published 12 ಜುಲೈ 2022, 13:59 IST
Last Updated 12 ಜುಲೈ 2022, 13:59 IST
   

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎರಡನೇ ವಾರ್ಷಿಕ ಘಟಿಕೋತ್ಸವ ಜುಲೈ 15ರಂದು ನಡೆಯಲಿದೆ.

ನಗರ ಹೊರವಲಯದ ನಂದಿನಿ ಪ್ಯಾಲೇಸ್‍ನಲ್ಲಿ ಬೆಳಿಗ್ಗೆ 10.30ಕ್ಕೆ ಆರಂಭವಾಗಲಿದ್ದು, ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಪದವಿ ಪ್ರದಾನ ಮಾಡಲಿದ್ದಾರೆ.

‘ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರಿನ ಜಯದೇವ ಹೃದ್ರೋಗ ಹಾಗೂ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’‌ ಎಂದು ವಿಶ್ವವಿದ್ಯಾಲಯ ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.

ADVERTISEMENT

ಕಳೆದ ವರ್ಷ ನವೆಂಬರ್‌ 27ರಂದು ಚೊಚ್ಚಲ ಘಟಿಕೋತ್ಸವ ನಡೆದಿತ್ತು. ಕೋಲಾರ ಜಿಲ್ಲೆಗೆ 2018ರಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮಂಜೂರಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.