
ಬಂಗಾರಪೇಟೆ: ತಾಲ್ಲೂಕಿನ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದರಸನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕಳ್ಳರು ಮನೆಯ ಬಾಗಿಲನ್ನು ಒಡೆದು ಮನೆಯಲ್ಲಿದ್ದ ₹ 50 ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಕುಂದರಸನಹಳ್ಳಿ ನಿವಾಸಿ ಶಿವಕುಮಾರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಬುಧವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದಿದ್ದನ್ನು ಗಮನಿಸಿದ್ದ ಕಳ್ಳರು ಮುಖ್ಯ ಬಾಗಿಲನ್ನು ಒಡೆದು ಮನೆಯಲ್ಲಿದ್ದ ₹50 ಸಾವಿರ ಹಣವನ್ನು ದೋಚಿದ್ದಾರೆ.
ಗುರುವಾರ ಬೆಳಗ್ಗೆ ಶಿವಕುಮಾರ್ ಅವರು ಮನೆಗೆ ಹಿಂತಿರುಗಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಮನೆಯ ಬಾಗಿಲು ಮುರಿದಿರುವುದನ್ನು ಕಂಡು ಬೀರುವನ್ನು ಪರಿಶೀಲಿಸಿದ್ದಾಗ ಹಣ ನಾಪತ್ತೆಯಾಗಿರುವುದು ದೃಢಪಟ್ಟಿದೆ. ಈ ಸಂಬಂಧ ಶಿವಕುಮಾರ್ ಅವರು ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.