ಬಂಗಾರಪೇಟೆ: ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವು ಗೆದ್ದು ಕಪ್ ಗೆಲ್ಲಬೇಕು ಎಂದು ಹರಕೆ ಹೊತ್ತಿರುವ ಯುವಕನೊಬ್ಬ ಮೂರು ತಿಂಗಳಿನಿಂದ ಬರಿಗಾಲಿನಲ್ಲಿ ನಡೆಯುತ್ತಿದ್ದಾನೆ.
ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಗುಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೂರು ಗ್ರಾಮದ ಶಿವಕುಮಾರ್ ಎಂಬ ಯುವಕ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ ಗೆಲ್ಲಬೇಕು ಎಂದು 3 ತಿಂಗಳ ಹಿಂದೆಯೇ ಅಯೋಧ್ಯೆಯ ರಾಮಮಂದಿರ ಮತ್ತು ವಾರಾಣಸಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ ಗೆಲ್ಲುವವರೆಗೆ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥಗೈಯ್ಯುವ ಮೂಲಕ ಅಂದಿನಿಂದ ಬರಿಗಾಲಿನಲ್ಲಿ ನಡೆಯುತ್ತಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.