ADVERTISEMENT

ಬಂಗಾರಪೇಟೆ | ಮನೆ ಕಳವು ಪ್ರಕರಣ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 4:56 IST
Last Updated 30 ಡಿಸೆಂಬರ್ 2025, 4:56 IST
ಆರೋಪಿಯಿಂದ ವಶಪಡಿಸಿಕೊಂಡಿರುವ ಆಭರಣ ಹಾಗೂ ವಾಹನದೊಂದಿಗೆ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಪೋಲಿಸ್ ಠಾಣೆಯ ಪೊಲೀಸರು
ಆರೋಪಿಯಿಂದ ವಶಪಡಿಸಿಕೊಂಡಿರುವ ಆಭರಣ ಹಾಗೂ ವಾಹನದೊಂದಿಗೆ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಪೋಲಿಸ್ ಠಾಣೆಯ ಪೊಲೀಸರು   

ಬಂಗಾರಪೇಟೆ: ಕಾಮಸಮುದ್ರ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆ ಕಳವು ಪ್ರಕರಣಗಳಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬುಕ್ಕಸಾಗರಂ ಗ್ರಾಮದ ಮಾದೇಶ್.ಆರ್ (25) ಬಂಧಿತ ಆರೋಪಿ. ಆರೋಪಿಯಿಂದ ₹2.50 ಲಕ್ಷ ಮೌಲ್ಯದ 17 ಗ್ರಾಂ ಚಿನ್ನಾಭರಣ, ₹55 ಸಾವಿರ ನಗದು, ಮೊಬೈಲ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ ಬೈಕ್‌ ಅನ್ನು ವಶಪಡಿಸಿಕೊಂಡಿದ್ದಾರೆ.

ಡಿ.9 ರಂದು ಕೊಳಮೂರು ಗ್ರಾಮದ ನಿವಾಸಿ ಲಕ್ಷ್ಮಿಭಾಯಿ ಹಾಗೂ ಡಿ.19 ರಂದು ಡಿ.ಪಿ.ಹಳ್ಳಿಯ ಈಶ್ವರ್‌ರಾವ್ ಎಂಬುವರು ತಮ್ಮ ಮನೆಗಳಲ್ಲಿ ಕಳ್ಳತನವಾಗಿರುವ ಬಗ್ಗೆ ಕಾಮಮುದ್ರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರತ್ಯೇಕ ಪ್ರಕರಣ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ADVERTISEMENT

ಪ್ರಕರಣ ತನಿಖೆಗೆ ಡಿವೈಎಸ್‌ಪಿ ವಿ.ಲಕ್ಷ್ಮಯ್ಯ ಮತ್ತು ಕಾಮಸಮುದ್ರ ಪ್ರಭಾರ ಸಿಪಿಐ ಎಸ್.ಟಿ.ಮಾರ್ಕೊಂಡಯ್ಯ ಅವರ ಮಾರ್ಗದರ್ಶನದಲ್ಲಿ, ಕಾಮಸಮುದ್ರ ಪಿಎಸ್‌ಐ ಬಿ.ವಿ.ಕಿರಣ್‌ಕುಮಾರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಕೊಳಮೂರು ಮತ್ತು ಡಿ.ಪಿ.ಹಳ್ಳಿಯ ಮನೆ ಕಳವು ಜೊತೆಗೆ ಕೆಜಿಎಫ್‌ ತಾಲ್ಲೂಕಿನ ಆಂಡರ್‌ಸನ್‌ ಪೇಟೆ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಲಕ್ಷ್ಮಿ ನಾರಾಯಣ, ಮುನಾವರ್‌ಪಾಷ, ರಾಮರಾವ್, ರಾಮಕೃಷ್ಣಾರೆಡ್ಡಿ, ಮಂಜುನಾಥ, ಮಾರ್ಕೊಂಡ, ಲಕ್ಷ್ಮಣತೇಲಿ, ಗುರುಮೂರ್ತಿ ಇದ್ದರು.

ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಪೋಲಿಸ್ ಠಾಣೆಯ ಮುಂಭಾಗ ಆರೋಪಿಯಿಂದ ವಶಪಡಿಸಿಕೊಂಡ ಕಳವು ಆಭರಣಗಳು ಮತ್ತು ಮೊಬೈಲ್

ಆಂಡ್ರಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನ ಒಂದು ಮನೆ ಕಳ್ಳತನ ಪ್ರಕರಣದಲ್ಲಿ ಕಳ್ಳತನ ಮಾಡಿರುವ ವಿಚಾರ ಬೆಳಕಿಗೆ ಬಂದಿದ್ದು, ಆತನಿಂದ ಕಳ್ಳತನ ಮಾಡಲಾಗಿದ್ದ ರೂ.2,00,000/- ಮೌಲ್ಯದ 17 ಗ್ರಾಂ ಚಿನ್ನದ ಆಭರಣ, 55,500/- ನಗದು, 10,000/- ರೂ ಬೆಲೆ ಬಾಳುವ ಒಂದು ಮೊಬೈಲ್ ಪೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ದ್ವಿಚಕ್ರವಾಹನವನ್ನು ವಶಪಡಿಸಿಕೊಂಡು ಆರೋಪಿಯ ವಿರುದ್ದ ಕಾನೂನು ಕ್ರಮ ವಹಿಸಿರುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.