ಬಂಗಾರಪೇಟೆ: ಇಲ್ಲಿನ ಅಮರಾವತಿ ಬಡಾವಣೆಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ವಾಯುವಿಹಾರ ಮಾಡುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಪಟ್ಟಣದ ನಿವಾಸಿ ರೆಡ್ಡಮ್ಮ ಮಾಂಗಲ್ಯ ಸರ ಕಳೆದುಕೊಂಡವರು. ಅವರು ಮಂಗಳವಾರ ರಾತ್ರಿ ರಸ್ತೆಯಲ್ಲಿ ವಾಯುವಿಹಾರ ಮಾಡುತ್ತಿದ್ದರು. ಆಗ ಪಲ್ಸರ್ ಬೈಕ್‌ನಲ್ಲಿ ಬಂದ ಅಪರಿಚಿತರು, 30 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.