ಬಂಗಾರಪೇಟೆ: ಅಪರಿಚಿತ ಗುಂಪೊಂದು ಯುವಕನೊಬ್ಬನ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಯುವಕ ಗಾಯಗೊಂಡಿದ್ದಾನೆ. ತಾಲ್ಲೂಕಿನ ದಾಸರಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಸತೀಶ್ (21 ವರ್ಷ) ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ಸಮಯದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ಯುವಕರು, ಲಾಗ್‌ನಿಂದ ಹಲ್ಲೆ ನಡೆಸಿ ಕಾರಿನಲ್ಲಿ ಪರಾರಿಯಾಗಿದ್ದಾರೆ.
ದಾಸರಹೊಸಳ್ಳಿ ಕೈಗಾರಿಕಾ ಪ್ರದೇಶದ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರು ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಸಿದ್ಧತೆ ನಡೆಸಿದ್ದರು. ಅಬಕಾರಿ ಇಲಾಖೆ ಅಧಿಕಾರಿಗಳು ಆಗಮಿಸಿದ್ದ ಸಂದರ್ಭದಲ್ಲಿ ಸರ್ವೆ ಮಾಡುವಾಗ ಗ್ರಾಮದ ಹಲವರು ಅಡ್ಡಿಪಡಿಸಿದ್ದರಿಂದ ಅಧಿಕಾರಿಗಳು ವಾಪಸ್ ಹೋಗಿದ್ದರು. ಇದರ ಮಧ್ಯೆ ನ್ಯಾಯಾಲಯದ ಮೊರೆ ಹೋಗಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯದಂತೆ ಗಾಯಾಳು ಸತೀಶ್ ಕಡೆಯವರು ತಡೆಯಾಜ್ಞೆ ತಂದಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ ಎಂದು ದೂರಲಾಗಿದೆ.
ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.