
ಪ್ರಜಾವಾಣಿ ವಾರ್ತೆ
ಮಾಲೂರು (ಕೋಲಾರ): ‘ಬೆಂಗಳೂರು ಸಮೀಪದ ಕೋಗಿಲು ಬಡಾವಣೆಯಲ್ಲಿ ನೆಲೆಸಿರುವವರು ಬಾಂಗ್ಲಾ ದೇಶದವರು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ?’ ಎಂದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಪ್ರಶ್ನಿಸಿದ್ದಾರೆ.
‘ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ. ಏಕೆ ಅವರನ್ನು ಇಲ್ಲಿಯವರೆಗೆ ಬರಲು ಬಿಟ್ಟರು? ಬಾಂಗ್ಲಾದಿಂದ ಅಕ್ರಮವಾಗಿ ಬಂದಿದ್ದರೆ ಬಂಧಿಸಿ ಜೈಲಿಗೆ ಹಾಕಲಿ’ ಎಂದು ಸವಾಲು ಹಾಕಿದರು.
ತಾಲ್ಲೂಕಿನ ತೋರ್ನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದವರು ಅಥವಾ ಅಕ್ಕಪಕ್ಕದ ರಾಜ್ಯದವರು ಆಗಿದ್ದರೆ ಅರ್ಹರಿಗೆ ಮನೆ ನೀಡಬೇಕಾಗುತ್ತದೆ’ ಎಂದು ಹೇಳಿದರು.
ಬೆಂಗಳೂರು ಸುತ್ತಮುತ್ತ ಬಿಜೆಪಿ ಶಾಸಕರು ಭೂ ಮಂಜೂರಾತಿ ಸಮಿತಿ ಮೂಲಕ ಸಾವಿರಾರು ಎಕರೆಯನ್ನು ಕಾರ್ಯಕರ್ತರಿಗೆ ನೀಡಿದ್ದಾರೆ. ಸಿಬಿಐ ತನಿಖೆ ನಡೆಸಿದರೆ ಎಲ್ಲವೂ ಹೊರಗೆ ಬರುತ್ತದೆ ಎಂದು ಹೇಳಿದರು.