ಕೋಲಾರ: ತಾಲ್ಲೂಕಿನ ನರಸಾಪುರ ಹೋಬಳಿಯ ದೊಡ್ಡವಲ್ಲಬಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರರ ನೂತನ ವಿಗ್ರಹ ಉದ್ಘಾಟನಾ ಸಮಾರಂಭ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ನಾಗಲಾಪುರ ಸಂಸ್ಥಾನ ಮಠದ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಉದ್ಘಾಟನೆ ನೆರವೇರಲಿದೆ.
ಸಂಜೆ 6 ಗಂಟೆಗೆ ರುದ್ರೇಶ್ ತಂಡದವರಿಂದ ವೀರಗಾಸೆ ಕುಣಿತ ಹಾಗೂ ಬಸವೇಶ್ವರ ಪಲ್ಲಕ್ಕಿ ಉತ್ಸವ ಮೆರವಣಿಗೆ ನಡೆಯಲಿದೆ ಎಂದು ವಿದ್ವಾಂಸ ಎನ್.ಆರ್.ಜ್ಞಾನಮೂರ್ತಿ, ಆಗಮಿಕ ನಿರಂಜನ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.