ADVERTISEMENT

ಬೇತಮಂಗಲ: ಕ್ಷಯ ರೋಗ ತಡೆಗೆ ಬಿಸಿಜಿ ಲಸಿಕೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 14:20 IST
Last Updated 23 ಏಪ್ರಿಲ್ 2025, 14:20 IST
ಬೇತಮಂಗಲ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಬಿಸಿಜಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು
ಬೇತಮಂಗಲ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಬಿಸಿಜಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು   

ಬೇತಮಂಗಲ: ಆರೋಗ್ಯ ಇಲಾಖೆಯಿಂದ ಬಿಸಿಜಿ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಗಣ್ಯರು ಚಾಲನೆ ನೀಡಿದರು.

ಕ್ಷಯ ರೋಗ ಬರದಂತೆ ತಡೆಯುವಲ್ಲಿ ಬಿಸಿಜಿ ಲಸಿಕೆ ಮಹತ್ವದ ಪಾತ್ರ ವಹಿಸಲಿದೆ, ಅದರಿಂದ ಪ್ರತಿಯೊಬ್ಬರೂ ಆರೋಗ್ಯ ಸಿಬ್ಬಂದಿಯ ಸಲಹೆ ಪಡೆದು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಬೇತಮಂಗಲ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಂಸ್ಕೃತಿ ಹೇಳಿದರು.

ಈಗಾಗಲೇ ಬಿಸಿಜಿ ಲಸಿಕೆ ಬಗ್ಗೆ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ, ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು. ಆದರೆ, ಗರ್ಭಿಣಿಯರು ಯಾವುದೇ ಕಾರಣಕ್ಕೂ ಬಿಸಿಜಿ ಲಸಿಕೆ ಹಾಕಿಸಿಕೊಳ್ಳಬಾರದು ಎಂದು ತಿಳಿಸಿದರು.

ADVERTISEMENT

ಗ್ರಾಪಂ ಅಧ್ಯಕ್ಷ ವಿನೂ ಕಾರ್ತಿಕ್, ಕಾರ್ಯದರ್ಶಿ ವೆಂಕಟೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ರೇಣುಕಾ ಸೋಮಣ್ಣ, ಸುಕನ್ಯಾ ಜಯಕುಮಾರ್, ಏಜಾಜ್ ಪಾಷ, ಡೈರಿ ಆನಂದ್, ಡೈರಿ ಮಂಜುನಾಥ್, ಓಂ ಸುರೇಶ್, ಆರೋಗ್ಯ ಇಲಾಖೆಯ ದಿವ್ಯ, ವಿದ್ಯಾ ಸೇರಿದಂತೆ ಗ್ರಾಪಂ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.