ADVERTISEMENT

ಜಿಹಾದಿ ಉಗ್ರರಿಗೆ ತಕ್ಕ ಪ್ರತ್ಯುತ್ತರ: ಬಿ.ವಿ.ಮಹೇಶ್

​ಪ್ರಜಾವಾಣಿ ವಾರ್ತೆ
Published 7 ಮೇ 2025, 15:30 IST
Last Updated 7 ಮೇ 2025, 15:30 IST
ಬಂಗಾರಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ. ಮಹೇಶ್ ನೇತೃತ್ವದಲ್ಲಿ ಜನಾಕ್ರೋಶ ಪ್ರತಿಭಟನೆ ನಡೆಸಲಾಯಿತು
ಬಂಗಾರಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ. ಮಹೇಶ್ ನೇತೃತ್ವದಲ್ಲಿ ಜನಾಕ್ರೋಶ ಪ್ರತಿಭಟನೆ ನಡೆಸಲಾಯಿತು   

ಬಂಗಾರಪೇಟೆ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಜಿಹಾದಿ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡಿದೆ. ಒಂಬತ್ತು ಉಗ್ರ ನೆಲೆಗಳ ಮೇಲೆ ದಾಳಿ ಮಾಡಿ, ಪಾಕಿಸ್ಥಾನ ಪ್ರೇರಿತ ಜಿಹಾದಿ ಉಗ್ರರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಜನಾಕ್ರೋಶ ಸಮಾವೇಶ ಹಾಗೂ ಪೂಜಾ ಕಾರ್ಯಕ್ಕಾಗಿ ಕೋಲಾರಕ್ಕೆ ತೆರಳುವ ಮುನ್ನ ಬಂಗಾರಪೇಟೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಪ್ರತಿಭಟಿಸಿದರು.

ರಾಜ್ಯದಲ್ಲಿ ಸರ್ಕಾರ ದಿವಾಳಿ: ಗ್ಯಾರಂಟಿ ಹೆಸರಲ್ಲಿ ಜನರ ಜೋಬಿಗೆ ಕತ್ತರಿ ಹಾಕುತ್ತಿರುವ ಕಾಂಗ್ರೆಸ್‌ ಸರ್ಕಾರವನ್ನು ಯಾಕಾದರೂ ಅಧಿಕಾರಕ್ಕೆ ತಂದೆವೋ ಎಂದು ಜನರು ಪರಿತಪಿಸುವಂತಾಗಿದೆ. ಒಂದು ಕಡೆ ಖಜಾನೆಯಲ್ಲಿರುವ ಹಣವೆಲ್ಲಾ ಗ್ಯಾರಂಟಿಗಳಿಗೆ ಬಳಸಿ ದಿವಾಳಿಯಾಗಿದೆ, ಮತ್ತೊಂದು ಕಡೆ ಸರ್ಕಾರಿ ನೌಕರರಿಗೆ ಸಂಬಳಕ್ಕೂ ಗತಿ ಇಲ್ಲದ ಸ್ಥಿತಿ ಇದೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಹಣವಿಲ್ಲ ಎಂದು ಟೀಕಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ, ಮಂಡಲ ಅಧ್ಯಕ್ಷ ಸಂಪಂಗಿ ರೆಡ್ಡಿ, ಬಿ.ಪಿ.ಮಹೇಶ್, ಸೀತಾರಾಮಪ್ಪ, ಹನುಮಪ್ಪ, ಶಶಿ, ಚೌಡಪ್ಪ, ಕಮಲ್‌ನಾತ್, ಬಿಂದು ಮಾಧವ, ಶಿವು, ವಿಜಿಕುಮಾರ್, ಸುರೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.