ಕೆಜಿಎಫ್: ಬೆಮಲ್ ರಾಜ್ಯದ ನಿರುದ್ಯೋಗಿಗಳಿಗೆ ಉದ್ಯೋಗ ನೀಡದೆ, ಉತ್ತರ ಭಾರತೀಯರಿಗೆ ಮಣೆ ಹಾಕುತ್ತಿದೆ ಎಂದು ಕನ್ನಡ ಶಕ್ತಿ ಕೇಂದ್ರ ಆರೋಪಿಸಿದೆ.
ಬೆಮೆಲ್‌ಗೆ ಈಗ ಅರವತ್ತರ ಸಂಭ್ರಮ. ಈ ಸಮಯದಲ್ಲಿ ಬೆಮೆಲ್ ಏಳಿಗೆಗಾಗಿ ಶ್ರಮಿಸಿರುವ ಗುತ್ತಿಗೆ ಆಧಾರಿತ ಕಾರ್ಮಿಕರಿಗೆ ಸೂಕ್ತ ಸಂಬಳ ಮತ್ತು ಸವಲತ್ತು ನೀಡದಿರುವುದು ಖಂಡನೀಯ. ಬೆಮೆಲ್‌ನ ಉತ್ಪಾದನಾ ಘಟಕಗಳು ಕರ್ನಾಟಕದ ಕೆಜಿಎಫ್, ಬೆಂಗಳೂರು ಹಾಗೂ ಮೈಸೂರಿನಲ್ಲಿ ಸಾವಿರಾರು ಎಕರೆ ಭೂ ಪ್ರದೇಶದಲ್ಲಿ ಸ್ಥಾಪನೆಯಾಗಿದ್ದು, ಸಿ ಮತ್ತು ಡಿ ವರ್ಗದ ಹುದ್ದೆಗಳಿಗೆ ಸ್ಥಳೀಯರಿಗೆ ಆದ್ಯತೆ ನೀಡದಿರುವುದು ಸರಿಯಲ್ಲ. ಈ ವಿಚಾರವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಅವರು ಸಿ ಮತ್ತು ಡಿ ವರ್ಗದ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಗೆ ಮೊದಲೇ ತಿಳಿಸಿ ನಾಲ್ಕು ಪತ್ರಗಳನ್ನು ಬೆಮಲ್‌ಗೆ ಬರೆದು ಎಚ್ಚರಿಕೆ ನೀಡಿದ್ದಾರೆ.
ಶಾಸಕಿ ಎಂ.ರೂಪಕಲಾ, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಮಾಜಿ ರಾಜ್ಯ ಸಭಾ ಸದಸ್ಯ ಹನುಮಂತಯ್ಯ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಈ ಸಂಬಂಧವಾಗಿ ಪತ್ರ ಬರೆದಿದ್ದರೂ, ಬೆಮಲ್ ಹಿರಿಯ ಅಧಿಕಾರಿಗಳು ಸ್ಥಳೀಯರನ್ನು ನಿರ್ಲಕ್ಷಿಸಿದ್ದಾರೆ ಎಂದು ಶಕ್ತಿ ಕೇಂದ್ರದ ಅಧ್ಯಕ್ಷ ಬಾ.ಹಾ.ಶೇಖರಪ್ಪ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.