
ಬಂಗಾರಪೇಟೆ: ತಾಲ್ಲೂಕಿನ ಸೂಲಿಕುಂಟೆ ಗ್ರಾಮದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯವು ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದೆ. ಇದರಿಂದಾಗಿ ಈ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯಲು ಆತಂಕಕ್ಕೆ ಸಿಲುಕಿದ್ದಾರೆ.
ಈ ವಿದ್ಯಾರ್ಥಿ ನಿಲಯದಲ್ಲಿ 50 ಬಾಲಕಿಯರು ದಾಖಲಾಗಿದ್ದು, ಬಹುತೇಕ ಬಾಲಕಿಯರು ಬಡ ಕೂಲಿ ಕಾರ್ಮಿಕರು, ರೈತರ ಮಕ್ಕಳೇ ಆಗಿದ್ದಾರೆ. ಸರ್ಕಾರಿ ವಸತಿ ನಿಲಯಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದೆ. ಆದರೆ, ಹಾಸ್ಟೆಲ್ ಸುಸಜ್ಜಿತವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.
ಕಟ್ಟಡವು ಶಿಥಿಲಾವಸ್ಥೆಯಲ್ಲಿರುವುದು ವಿದ್ಯಾರ್ಥಿಗಳ ಜೀವಕ್ಕೆ ಆಪತ್ತು ಎದುರಾಗಿದೆ. ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಮಳೆ ಬಂದರೆ, ವಿದ್ಯಾರ್ಥಿನಿಲಯವು ಸೋರುತ್ತದೆ. ಮೇಲ್ಚಾವಣಿಯ ಸಿಮೆಂಟ್ ಉದುರು ಬೀಳುತ್ತಿದೆ. ವಸತಿ ನಿಲಯದಲ್ಲಿನ ಶೌಚಾಲಯಗಳು ಗಬ್ಬು ನಾರುತ್ತಿವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ವಿದ್ಯಾರ್ಥಿನಿಲಯವು ಶಿಥಿಲಾವಸ್ಥೆ ತಲುಪಿದೆ ಎಂಬುದು ಗಮನಕ್ಕೆ ಬಂದಿದೆ. ಅನುದಾನ ಬಂದ ಕೂಡಲೇ ದುರಸ್ತಿಗೆ ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಕುಮಾರಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.