ಮುಳಬಾಗಿಲು: ಬೆಸ್ಕಾಂ ಹಾಗೂ ಇತರ ವಿದ್ಯುತ್ ಸರಬರಾಜು ಸಂಸ್ಥೆಗಳು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿ ಸೋಮವಾರ ಬೆಸ್ಕಾಂ ಕಚೇರಿಯ ಮುಂದೆ ನೌಕರರು ಸಾಂಕೇತಿಕ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ಖಾಸಗೀಕರಣಕ್ಕೆ ಅವಕಾಶ ಕೊಡಬಾರದು. ಬೆಸ್ಕಾಂ ಅನ್ನು ಉಳಿಸಬೇಕು ಎಂದು ಒತ್ತಾಯಿಸಿದರು. ತಾಲ್ಲೂಕು ಬೆಸ್ಕಾಂ ನೌಕರರ ಸಂಘ, ತಾಲ್ಲೂಕು ಬೆಸ್ಕಾಂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘದಿಂದ ಪ್ರತಿಭಟನೆ ನಡೆಯಿತು. ಬೆಸ್ಕಾಂ ಅಧಿಕಾರಿ ರಮೇಶ್, ತಾಲ್ಲೂಕು ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ವೆಂಕಟರವಣಪ್ಪ, ಎಸ್‌ಸಿ, ಎಸ್‌ಟಿ ಸಂಘದ ಅಧ್ಯಕ್ಷ ಬಿ.ಎನ್.ನಾರಾಯಣಸ್ವಾಮಿ, ಶ್ರೀನಾಥ್, ಭಾಸ್ಕರ್, ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.